ಬಾಗಲಕೋಟೆ:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೈಲಾ ಉಪವಿಧಿಗಳು-2022 ರ ಉಪವಿಧಿಗಳಿಗೆ ತಿದ್ದುಪಡಿ ತರಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾ ಸಭೆಯನ್ನು ವಾಸ್ತವ ಹಾಗೂ ವರ್ಚುವಲ್ ವಿಧಾನದ ಮೂಲಕ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 01 ರಂದು ಕೊಪ್ಪಳದಲ್ಲಿ ಕರೆಯಲಾಗಿದೆ ಎಂದು ಇಳಕಲ್ ತಾಲ್ಲೂಕಿನ ಅಧ್ಯಕ್ಷರಾದ ಪರಶುರಾಮ ಎಸ್ ಪಮ್ಮಾರ ರವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಇವರು ರಾಜ್ಯ ವಿಶೇಷ ಮಹಾಸಭೆಯು ಅಕ್ಟೋಬರ್ 1 ರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಹಿರೇಸಿಂದೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಜರುಗಲಿದ್ದು, ಇಳಕಲ್ ತಾಲೂಕಿನ ಸರ್ವ ಸದಸ್ಯರು ಭಾಗವಹಿಸಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ವರ್ಚುವಲ್ ವೇದಿಕೆ ಮೂಲಕ ಸಹ ಭಾಗವಹಿಸಲು ಸದಸ್ಯರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದ್ದು,
https://bit.ly/KSGEA splgbm ಈ ಲಿಂಕ್ ಬಳಸಿ ಸಭೆಯಲ್ಲಿ ಭಾಗವಹಿಸಬಹುದಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿಗಳಾದ ಗುಂಡಪ್ಪ ಕುರಿ ರವರನ್ನು ಸಂಪರ್ಕಿಸಲು ಕೋರಿದ್ದಾರೆ.