ಭಟ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಬಸ್ ದರ ಏರಿಕೆ, ರಾಜ್ಯದಲ್ಲಿ ಗುತ್ತಿಗೆದಾರರ ಆತ್ಮಹತ್ಯೆ ,ಬಡ ಬಾಣಂತಿಯರ ಸಾವು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಭಟ್ಕಳ ಬಿಜೆಪಿ ಮಂಡಳ ವತಿಯಿಂದ ಪ್ರತಿಭಟನೆ ನಡೆಸಿ, ಭಟ್ಕಳ ಸಹಾಯಕ ಆಯುಕ್ತ ರ ಅನುಪಸ್ಥಿತಿಯಲ್ಲಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ನಿಡಲಾಯಿತು.
ಬಿಜೆಪಿ ಜಿಲ್ಲಾ ಮುಖಂಡ ಶ್ರೀಕಾಂತ್ ನಾಯ್ಕ ಆಸರಕೆರಿ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ದಿನದಿಂದ ಭ್ರಷ್ಟಾಡಳಿತ ನಡೆಸುತ್ತಿದೆ . ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ನಿಧಿಲೂಟಿ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿ ರಾಜ್ಯದಲ್ಲಿ ಭ್ರಷ್ಟ ಆಡಳಿತ ನಡೆಸುತ್ತಿದೆ. ಇದೇ ರೀತಿ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳು ವುದು. ಈ ಸರಕಾರದ ಮುಖ್ಯಮಂತ್ರಿಗಳು ಇದಕ್ಕೆ ನೇರ ಹೊಣೆಗಾರರು ಆದ್ದರಿಂದ ತಕ್ಷಣ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಭಟ್ಕಳ ಮಂಡಲ ಪ್ರಮುಖರು , ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧ ನೀತಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ ಮುರುಡೇಶ್ವರ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ದುರಾಡಳಿತದ ಫಲವಾಗಿ ರಾಜ್ಯದಲ್ಲಿ ಗುತ್ತಿಗೆದಾರರ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಇದಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ನೇರ ಹೊಣೆ ,ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ನೀಡಿ ಈಗ ಬಸ್ ದರ ಏರಿಕೆ ಮಾಡುವ ಮೂಲಕ ಆ ಹೊರೆ ಗಂಡಸರ ಮೇಲೆ ಹಾಕುವ ಪ್ರಯತ್ನ ಮಾಡತ್ತಿದೆ. ಪಂಚ ಗ್ಯಾರಂಟಿ ನೀಡಿ ಭ್ರಷ್ಟಾಚಾರದ ಆಡಳಿತದ ಮಾಡುತ್ತಿದ್ದಾರೆ. ಕಳಪೆ ಗುಣಮಟ್ಟದ ಔಷಧಿ ನೀಡಿ ಬಾಣಂತಿಯರ ಸಾವಿಗೆ ಕಾರಣರಾದ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ
ಧಿಕ್ಕಾರ.ಉಚಿತ ಗ್ಯಾರಂಟಿ ಭರವಸೆ ನೀಡಿ ತಮ್ಮ ಜೇಬು ತುಂಬಿಸಿ ಕೊಳ್ಳುತ್ತಿದ್ದಾರೆ.ಬಡ ಬಾಣಂತಿಯರ ಸಾವನ್ನು ಹಗುರವಾಗಿ ಪರಗಣಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯ ಎಸೆಯುವ ಮೂಲಕ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಬಿಜೆಪಿ ಮುಖಂಡರಾದ ಶ್ರೀನಿವಾಸ ನಾಯ್ಕ ಮುಟ್ಟಳ್ಳಿ, ರಾಘು ನಾಯ್ಕ, ಪ್ರಮೋದ್ ಜೋಶಿ, ಉದಯ ನಾಯ್ಕ , ಬಿಜೆಪಿ ಮಹಿಳಾ ಮೋರ್ಚಾ ಪ್ರಮುಖರು , ಬಿಜಿಪಿ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.