ಭಟ್ಕಳ್ದ ಲ್ಲಿ ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ -ನಾಲ್ವರಿಗೆ ಗಂಭೀರ ಗಾಯ
ಭಟ್ಕಳ : ಬೆಳಕೆಯ ರಾಷ್ಟೀಯ ಹೆದ್ದಾರಿ 66ರಲ್ಲಿ ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬಂಧಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಅಪಘಾತದಲ್ಲಿ ಓರ್ವ ಮೀನುಗಾರ ಮಹಿಳೆ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋ ಬೆಳಕೆ ಕಡೆಯಿಂದ ಭಟ್ಕಳದ ಕಡೆ ಚಲಿಸುತ್ತಿದ್ದು, ಇನ್ನೂ ಟಾಟಾ ಏಸ್ ಭಟ್ಕಳದಿಂದ ಶಿರೂರು ಕಡೆ ಚಲಿಸುತ್ತಿರುವುದಾಗಿ ಹೇಳಲಾಗಿದೆ. ಅಪಘಾತದಲ್ಲಿ ಆಟೋ ಚಾಲಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ನಾಲ್ವರಲ್ಲಿ ಇಬ್ಬರನ್ನ ಮಣಿಪಾಲ ಹಾಗೂ ಇನ್ನಿಬ್ಬರನ್ನ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

