• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 20, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾರಿಕಾಂಬಾ ದೇವಸ್ಥಾನ ಜಾತ್ರೆ ಮುನ್ನ ಆನ್‌ಲೈನ್ ವಂಚನೆ ಎಚ್ಚರಿಕೆ ಅಧಿಕೃತವಲ್ಲದ ಜಾಲತಾಣಗಳಿಂದ ಹಣ ಪಾವತಿಸಬೇಡಿ: ದೇಗುಲ ಆಡಳಿತ ಮಂಡಳಿ ಮನವಿ

Kannada News Desk by Kannada News Desk
February 20, 2026
in ಉತ್ತರ ಕನ್ನಡ
0
ಮಾರಿಕಾಂಬಾ ದೇವಸ್ಥಾನ ಜಾತ್ರೆ ಮುನ್ನ ಆನ್‌ಲೈನ್ ವಂಚನೆ ಎಚ್ಚರಿಕೆ ಅಧಿಕೃತವಲ್ಲದ ಜಾಲತಾಣಗಳಿಂದ ಹಣ ಪಾವತಿಸಬೇಡಿ: ದೇಗುಲ ಆಡಳಿತ ಮಂಡಳಿ ಮನವಿ
0
SHARES
1
VIEWS
WhatsappTelegram Share on FacebookShare on TwitterLinkedin

 


ಶಿರಸಿ: ಎರಡು ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಫೆಬ್ರವರಿ 24ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆ ಭಕ್ತರಲ್ಲಿ ಭಾರೀ ಉತ್ಸಾಹ ಕಂಡುಬರುತ್ತಿದೆ. ಆದರೆ ಇದೇ ಸಂದರ್ಭವನ್ನು ಬಳಸಿಕೊಂಡು ಕೆಲ ಆನ್‌ಲೈನ್ ವೇದಿಕೆಗಳು ಭಕ್ತರನ್ನು ಗುರಿಯಾಗಿಸಿಕೊಂಡು ವಂಚನೆಗೆ ಯತ್ನಿಸುತ್ತಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.


‘ಯಜಮಾನ’ ಎಂಬ ಹೆಸರಿನ ಜಾಲತಾಣ ಹಾಗೂ ಅದರ ಸಾಮಾಜಿಕ ಜಾಲತಾಣ ಪುಟಗಳಿಗೆ ಶ್ರೀ ಮಾರಿಕಾಂಬಾ ದೇವಸ್ಥಾನದೊಂದಿಗೆ ಯಾವುದೇ ಸಂಬಂಧ ಇಲ್ಲ ಎಂದು ದೇಗುಲ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ದೇವಿಯ ಹೆಸರಿನಲ್ಲಿ ಪೂಜೆ, ಸೇವೆ ಮಾಡಿಸುವುದಾಗಿ ಹೇಳಿ ಹಣ ಸಂಗ್ರಹಿಸುವ ಪ್ರಯತ್ನಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ.AI ಆಧಾರಿತ ಭಾವನಾತ್ಮಕ ವಿಡಿಯೋ ಮೂಲಕ ಪ್ರಚಾರ ಜಾತ್ರೆಗೆ ಸ್ವಯಂ ಹಾಜರಾಗಲು ಸಾಧ್ಯವಾಗದ ಭಕ್ತರನ್ನು ಗುರಿಯಾಗಿಸಿಕೊಂಡು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಭಾವನಾತ್ಮಕ ಸಂದೇಶ ಹೊಂದಿದ ವಿಡಿಯೋಗಳನ್ನು ಹಂಚಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ‘ಮನೆಯಲ್ಲಿ ಕುಳಿತು ವಿಶೇಷ ಸೀರೆ ಸೇವೆ’ ಎಂಬ ಹೆಸರಿನಲ್ಲಿ ಪ್ರಚಾರ ನಡೆಸಿ ಹಣ ಪಾವತಿಸಲು ಮನವೊಲಿಸಲಾಗುತ್ತಿದೆ.ವಂಚಕರು ದೇವಿಗೆ ಸೀರೆ ಉಡಿ ಸಲ್ಲಿಸುವ ಸೇವೆಗೆ ₹351 ಮತ್ತು ಪ್ರಸಾದ ಕಳುಹಿಸುವ ಹೆಸರಿನಲ್ಲಿ ಹೆಚ್ಚುವರಿಯಾಗಿ ₹199 ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಸಾದವಾಗಿ ಬ್ಲೌಸ್ ಪೀಸ್, ಕುಂಕುಮ, ಹಳದಿ ಕಳುಹಿಸಲಾಗುತ್ತದೆ ಎಂಬ ಹೇಳಿಕೆಯೂ ವಿಡಿಯೋಗಳಲ್ಲಿ ಕಾಣಿಸಿಕೊಂಡಿದೆ.


ಅಧಿಕೃತ ಸೇವೆಗಳ ಕುರಿತು ಸ್ಪಷ್ಟನೆ
ದೇಗುಲ ಸನ್ನಿಧಿಯಲ್ಲಿ ‘ಉಡಿ ಸೇವೆ’ಗೆ ₹351 ನಿಗದಿ ದರ ಇಲ್ಲ. ಜೊತೆಗೆ ಪ್ರಸಾದವನ್ನು ಕೋರಿಯರ್ ಮೂಲಕ ಮನೆಗೆ ತಲುಪಿಸುವ ವ್ಯವಸ್ಥೆಯೂ ಇಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ವಿಡಿಯೋದಲ್ಲಿ ಕಾಣಿಸುವ ಅರ್ಚಕರು ಸ್ಥಳೀಯರಲ್ಲ; ಅವರಿಗೆ ದೇಗುಲ ಆಡಳಿತ ಮಂಡಳಿಯೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ತಿಳಿಸಲಾಗಿದೆ.“ಶ್ರೀ ಮಾರಿಕಾಂಬಾ ದೇವಸ್ಥಾನದ ಅಧಿಕೃತ ಆನ್‌ಲೈನ್ ಸೇವೆಗಳು ಮತ್ತು ಪಾವತಿಗಳು ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅಥವಾ ದೇವಸ್ಥಾನದ ನೇರ ವ್ಯವಸ್ಥೆಯ ಮೂಲಕ ಮಾತ್ರ ನಡೆಯುತ್ತವೆ. ಅಪರಿಚಿತ ಲಿಂಕ್‌ಗಳು ಅಥವಾ ಖಾಸಗಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವುದರಿಂದ ದೂರವಿರಬೇಕು,” ಎಂದು ಆಡಳಿತ ಮಂಡಳಿ ಮನವಿ ಮಾಡಿದೆ.


ಸಂಶಯಾಸ್ಪದ ಚಟುವಟಿಕೆ ಕಂಡರೆ ದೂರು ನೀಡಿ
ಈ ರೀತಿಯ ಆನ್‌ಲೈನ್ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಯಾವುದೇ ಅನುಮಾನಾಸ್ಪದ ಕರೆ, ಲಿಂಕ್ ಅಥವಾ ಖಾತೆ ವಿವರಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಶಿರಸಿಯ ವೈದ್ಯ ಡಾ. ರವಿಕಿರಣ ಪಟವರ್ಧನ ಅವರು ಮನವಿ ಮಾಡಿದ್ದಾರೆ.ಜಾತ್ರೆ ಸಂದರ್ಭದಲ್ಲಿ ಭಕ್ತರು ಅಧಿಕೃತ ಮಾಹಿತಿಯನ್ನು ಮಾತ್ರ ನಂಬಿ, ಪರಿಶೀಲಿತ ಮಾರ್ಗಗಳ ಮೂಲಕವೇ ಸೇವೆ ಪಡೆಯುವುದು ಸೂಕ್ತ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಅರಣ್ಯ ಹಕ್ಕು ಮರುಪರಿಶೀಲನೆ ಪ್ರಕ್ರಿಯೆ ಸಮರ್ಪಕವಾಗಿರಲಿ: ಜಿಲ್ಲಾಡಳಿತಕ್ಕೆ ಹೋರಾಟ ಸಮಿತಿಯ ಮನವಿ

Kannada News Desk

Kannada News Desk

Please login to join discussion

ಕ್ಯಾಲೆಂಡರ್

February 2026
MTWTFSS
 1
2345678
9101112131415
16171819202122
232425262728 
« Jan    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d