• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, March 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಡುಗೆ ಅನಿಲ ಸರಬರಾಜು ಸ್ಥಿರ – ಜನರು ಆತಂಕ ಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

Kannada News Desk by Kannada News Desk
March 12, 2026
in ಉತ್ತರ ಕನ್ನಡ
0
ಅಡುಗೆ ಅನಿಲ ಸರಬರಾಜು ಸ್ಥಿರ – ಜನರು ಆತಂಕ ಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
0
SHARES
103
VIEWS
WhatsappTelegram Share on FacebookShare on TwitterLinkedin

ಕಾರವಾರ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆ ದೇಶದ ಹಲವು ಭಾಗಗಳಲ್ಲಿ ಅಡುಗೆ ಅನಿಲ ಸರಬರಾಜಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜು ಸಾಮಾನ್ಯವಾಗಿ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಜಿಲ್ಲೆಗೆ ಅನಿಲ ಪೂರೈಸುವ ಕಂಪನಿಗಳ ಪ್ರತಿನಿಧಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲದ ದೈನಂದಿನ ಪೂರೈಕೆ ಹಾಗೂ ವಿತರಣೆಯಲ್ಲಿ ಯಾವುದೇ ವ್ಯತ್ಯಯವಿಲ್ಲದೆ ಎಂದಿನಂತೆ ಸೇವೆ ಮುಂದುವರಿಯುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರು ಅನಗತ್ಯ ಗೊಂದಲ ಅಥವಾ ಭೀತಿಗೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದರು.
ಜಿಲ್ಲೆಗೆ ಅನಿಲ ಸರಬರಾಜು ಮಾಡುವ ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಮತ್ತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಂಪನಿಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ, ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆ ನಿರಂತರವಾಗಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಈ ವೇಳೆ ಅಧಿಕಾರಿಗಳು ಪ್ರತಿಕ್ರಿಯಿಸಿ, ಗೃಹಬಳಕೆಯ ಅನಿಲ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಕಳೆದ ಒಂದು ದಿನ ಗ್ಯಾಸ್ ಮುಂಗಡ ಬುಕ್ಕಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ತೊಂದರೆ ಕಂಡುಬಂದಿದ್ದರೂ, ಈಗ ಅದನ್ನು ಸರಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.ಸಾರ್ವಜನಿಕರು ಗ್ಯಾಸ್ ಬುಕ್ಕಿಂಗ್ ಮಾಡಲು ಕೇವಲ ಮಿಸ್ ಕಾಲ್ ವಿಧಾನಕ್ಕೆ ಮಾತ್ರ ಸೀಮಿತವಾಗದೇ, ಐವಿಆರ್‌ಎಸ್, ವಾಟ್ಸಾಪ್, ಮೊಬೈಲ್ ಅಪ್ಲಿಕೇಶನ್ ಹಾಗೂ ವಿವಿಧ ಪಾವತಿ ಆ್ಯಪ್‌ಗಳ ಮೂಲಕವೂ ಬುಕ್ಕಿಂಗ್ ಮಾಡಬಹುದು ಎಂದು ತಿಳಿಸಲಾಗಿದೆ.

ಇದೇ ವೇಳೆ ಜಿಲ್ಲಾಧಿಕಾರಿ, ಅಂಗನವಾಡಿ ಕೇಂದ್ರಗಳು, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್‌ಗಳು ಹಾಗೂ ಇಂದಿರಾ ಕ್ಯಾಂಟೀನ್‌ಗಳಂತಹ ಸಾರ್ವಜನಿಕ ಸೇವಾ ಸಂಸ್ಥೆಗಳ ದೈನಂದಿನ ಕಾರ್ಯಗಳಿಗೆ ಯಾವುದೇ ಅಡಚಣೆ ಆಗದಂತೆ ಆದ್ಯತೆಯ ಆಧಾರದ ಮೇಲೆ ಅನಿಲ ಸರಬರಾಜು ಮಾಡಬೇಕು ಎಂದು ಸೂಚಿಸಿದರು.
ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಪೂರೈಕೆ ಸಂಬಂಧ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ ಅವರು, ಅನಿಲ ಸರಬರಾಜು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ಸೇರಿದಂತೆ ಅನಿಲ ಸರಬರಾಜು ಕಂಪನಿಗಳ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ತಾಲೂಕುಗಳ ಅನಿಲ ವಿತರಕರು ವರ್ಚುವಲ್ ಮೂಲಕ ಭಾಗವಹಿಸಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಹೊನ್ನಾವರದಲ್ಲಿ ಭಾರಿ ಜನಸಮಾವೇಶ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಾತ್ಕಾಲಿಕ ಬ್ರೇಕ್: ಸಿಂಗಳೀಕ ಅಭಯಾರಣ್ಯದಲ್ಲಿ ಕಾಮಗಾರಿ ನಿಷೇಧಿಸಿದ ಹೈಕೋರ್ಟ್

Kannada News Desk

Kannada News Desk

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಹೊನ್ನಾವರದಲ್ಲಿ ಭಾರಿ ಜನಸಮಾವೇಶ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಾತ್ಕಾಲಿಕ ಬ್ರೇಕ್: ಸಿಂಗಳೀಕ ಅಭಯಾರಣ್ಯದಲ್ಲಿ ಕಾಮಗಾರಿ ನಿಷೇಧಿಸಿದ ಹೈಕೋರ್ಟ್

Please login to join discussion

ಕ್ಯಾಲೆಂಡರ್

March 2026
MTWTFSS
 1
2345678
9101112131415
16171819202122
23242526272829
3031 
« Feb    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d