ಭಟ್ಕಳ- ಭಟ್ಕಳ ಪಟ್ಟಣದ ಸಮೀಪದಲ್ಲಿರುವ ಪ್ರದೇಶದಲ್ಲಿ ಕೂಲಿ ಕಾರ್ಮಿಕನೊಬ್ಬ ಮೃತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮೃತರನ್ನು ಮಂಜುನಾಥ ನಾಯ್ಕ (54) ಎಂದು ಗುರುತಿಸಲಾಗಿದೆ.ಕುಕುನಿರ್ ಭಾಗದ ನಿವಾಸಿಯಾಗಿದ್ದ ಮಂಜುನಾಥ ಅವರು ದೈನಂದಿನ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮಾರ್ಚ್ 14ರ ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಅವರು ಕೆಲಸಕ್ಕೆ ತೆರಳಿದ್ದರೆಂದು ತಿಳಿದುಬಂದಿದೆ. ಆದರೆ ನಂತರದ ದಿನ ಮಧ್ಯಾಹ್ನದ ಹೊತ್ತಿಗೆ ಅವರು ಶವವಾಗಿ ಪತ್ತೆಯಾಗಿರುವುದು.

ಗಮನಾರ್ಹ.
ಭಾರತ ಪೆಟ್ರೋಲ್ ಬಂಕ್ ಸಮೀಪದಲ್ಲಿರುವ ಖಾಲಿ ಜಾಗದಲ್ಲಿ, ದಿಲ್ಮನ್ ಮನೆ ಹತ್ತಿರ ಅವರ ಮೃತದೇಹ ಕಂಡುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ.ಈ ಕುರಿತು ಸ್ಥಳೀಯ ನಿವಾಸಿ ಕೃಷ್ಣ ಸೋಮಯ್ಯ ನಾಯ್ಕ ಮಾಹಿತಿ ನೀಡಿದ್ದು, ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

