ಭಟ್ಕಳ ಮೂರಿನಕಟ್ಟೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Deepan ಸ್ಪಷ್ಟನೆ ನೀಡಿದ್ದಾರೆ. ಮೂಲ ಮೂರಿನಕಟ್ಟೆ ಸಂಪೂರ್ಣ ಸುರಕ್ಷಿತವಾಗಿದ್ದು, ಅದನ್ನು ಕೆಡವಿಲ್ಲ ಎಂದು ಅವರು ತಿಳಿಸಿದ್ದಾರೆ. ಮೂಲ ಕಟ್ಟೆ ಇದ್ದ ಜಾಗದಲ್ಲೇ ಯಥಾಸ್ಥಿತಿಯಲ್ಲಿದೆ ಎಂದು ಛಾಯಾಚಿತ್ರಗಳ ಸಮೇತ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ಹಿನ್ನೆಲೆಯಲ್ಲಿ ಮೂಲ ಕಟ್ಟೆಯನ್ನು ಸ್ಥಳಾಂತರಿಸಲು ಆದೇಶಿಸಲಾಗಿತ್ತು. ಸ್ಥಳೀಯರ ಮನವಿಯ ಮೇರೆಗೆ National Highways Authority of India ಸಿಬ್ಬಂದಿ ಪಕ್ಕದಲ್ಲೇ ಪರ್ಯಾಯ ಕಟ್ಟೆ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಆದರೆ, ಹೊಸ ಕಟ್ಟೆ ನಿರ್ಮಾಣದ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಯೊಂದಿಗೆ ಹರಿಬಿಟ್ಟ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ವೈರಲ್ ವಿಡಿಯೋ ಹಿನ್ನೆಲೆ ಸ್ಥಳಕ್ಕೆ ಜಮಾಯಿಸಿದ ಕೆಲವರು ನಿರ್ಮಾಣವಾಗುತ್ತಿದ್ದ ಪರ್ಯಾಯ ಕಟ್ಟೆಯನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದ ಪೊಲೀಸರ ಮೇಲೆಯೇ ಗುಂಪು ಹಲ್ಲೆ ನಡೆಸಿ ಗಲಾಟೆ ಸೃಷ್ಟಿಸಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.
ಇದೇ ಸಂದರ್ಭದಲ್ಲಿ ಸಚಿವ Mankal Vaidya ಅವರಿಗೆ ಕೆಲವರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೂಡ ನಡೆದಿದೆ. ತಡರಾತ್ರಿ ಅದೇ ಸ್ಥಳದಲ್ಲಿ ಮರಳಿ ಕಟ್ಟೆ ನಿರ್ಮಿಸಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಹೆದ್ದಾರಿ ತಡೆ, ಪೊಲೀಸರ ಮೇಲಿನ ಹಲ್ಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟ ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು Bhatkal Shahar Police Stationನಲ್ಲಿ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದ್ದು, ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ Bhatkal Town Panchayat ಹಾಗೂ Jali Panchayat ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಸೆಕ್ಷನ್ 144 / ಬಿಎನ್‌ಎಸ್‌ಎಸ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಭದ್ರತೆಗಾಗಿ 9 ಕೆಎಸ್‌ಆರ್‌ಪಿ, 3 ಡಿಎಆರ್ ತುಕಡಿಗಳು ಸೇರಿದಂತೆ 300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು ಶಾಂತಿಯುತವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ವದಂತಿಗಳು ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳದೆ, ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
