ಭಟ್ಕಳ, ಮೇ 28: ಭಟ್ಕಳ ಮುರಿನ ಕಟ್ಟೆ ದ್ವಂಸ ಪ್ರಕರಣವನ್ನು ಖಂಡಿಸಿ Bharatiya Janata Party ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮೇ 29ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಭಟ್ಕಳ ಆಟೋ ಚಾಲಕರ ಮಾಲಕರ ಗಣೇಶೋತ್ಸವ ಮೈದಾನದಲ್ಲಿ ಕಾರ್ಯಕರ್ತರು ಸೇರಿ, ಅಲ್ಲಿಂದ ಉಪ ವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಆಗ್ರಹ ಪತ್ರ ಸಲ್ಲಿಸಲಿದ್ದಾರೆ.ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ B. Y. Vijayendra, ವಿರೋಧ ಪಕ್ಷದ ನಾಯಕ R. Ashoka, ಉತ್ತರ ಕನ್ನಡ ಸಂಸದ Vishweshwar Hegde Kageri, ಜಿಲ್ಲಾಧ್ಯಕ್ಷ N. S. Hegde ಸೇರಿದಂತೆ ಹಲವು ರಾಜ್ಯ ಹಾಗೂ ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಹಾನಿಗೊಳಗಾದ ಪೀಠವನ್ನು ಮರು ನಿರ್ಮಿಸಬೇಕು ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಪಕ್ಷದ ಮುಖಂಡರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
