
17 ವರ್ಷಗಳ ಬಳಿಕ ಮತ್ತೆ 2 ನೆ ಬಾರಿಗೆ ಟಿ20 ವಿಶ್ವ ಚಾಂಪಿಯನ್ ಆದ ಭಾರತ

ಬೆಂಗಳೂರು : ವೆಸ್ಟ್ಇಂಡೀಸ್ನ ಬಾರ್ಬಡೋಸ್‌ನಲ್ಲಿ ಜೂನ್ 29 ರಂದು ನಡೆದ ಐಸಿಸಿ ಪುರುಷರ ವಿಶ್ವಕಪ್ 2024 ರ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಇದರೊಂದಿಗೆ ಭಾರತವು 13 ವರ್ಷಗಳ ವಿಶ್ವ ಕಪ್ ಹಾಗೂ 17 ವರ್ಷಗಳ ಟಿ20 ವಿಶ್ವ ಕಪ್ ಕೊರತೆಯನ್ನು ನೀಗಿಸಿತು. ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ.

ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ತನ್ನ 11 ವರ್ಷಗಳ ಐಸಿಸಿ ಟ್ರೋಫಿಯ ಬರವನ್ನು ಕೊನೆಗೊಳಿಸಿತು. ಭಾರತ ಈ ಹಿಂದೆ 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅದೇ ಸಮಯದಲ್ಲಿ ಭಾರತ 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಆದರೆ ಗೆಲುವಿನ ಖುಷಿಯಲ್ಲಿ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.

ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಫೈನಲ್ ಪಂದ್ಯದಲ್ಲಿ ಕಿಂಗ್ ವಿರಾಟ್ ಕೊಹ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಕಂಬ್ಯಾಕ್ ಮಾಡಿದ ಕೊಹ್ಲಿ ವಿಶ್ವಕಪ್ ಗೆಲ್ಲುತ್ತಿದ್ದಂತೆಯೇ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಇದು ನನ್ನ ಕೊನೆಯ ವಿಶ್ವಕಪ್ ಎಂದು ಕೊಹ್ಲಿ ಹೇಳಿದ್ದಾರೆ. ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯುವ ಕನಸು ಕಂಡಿದ್ದ ಕೊಹ್ಲಿ, ಭಾರತಕ್ಕಾಗಿ ಕೊನೆಯ ಬಾರಿಗೆ ಟಿ20 ಪಂದ್ಯವನ್ನು ಆಡಿದೆ ಎಂದು ಹೇಳುವ ಮೂಲಕ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಇದು ಕೊಹ್ಲಿಯ ಕೊನೆಯ ಪಂದ್ಯವಾಗಿದ್ದರೂ ಸಹ, ಅವರು ಟೀಂ ಇಂಡಿಯಾಕ್ಕಾಗಿ ಅನೇಕ ದಾಖಲೆಗಳೊಂದಿಗೆ ತಮ್ಮ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಕೊನೆಗೊಳಿಸಿದರು. ಕೊಹ್ಲಿ 12 ಜೂನ್ 2010 ರಂದು ಟೀಂ ಇಂಡಿಯಾ ಪರ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದರು. ಇದೀಗ ಬರೋಬ್ಬರಿ 14 ವರ್ಷಗಳ ನಂತರ ತಮ್ಮ ಕೊನೆಯ ಪಂದ್ಯವನ್ನು ಆಡಿದ ಕೊಹ್ಲಿ ಇದುವರೆಗೆ 125 ಟಿ20 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 48.69 ರ ಸರಾಸರಿಯಲ್ಲಿ 4188 ರನ್ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ಟಿ20 ವೃತ್ತಿಜೀವನದಲ್ಲಿ 1 ಶತಕ ಮತ್ತು 38 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇಷ್ಟೇ ಅಲ್ಲ, ಟಿ20 ವಿಶ್ವಕಪ್ ಇತಿಹಾಸದಲ್ಲೇ ಗರಿಷ್ಠ 1292 ರನ್ ಗಳಿಸುವ ಮೂಲಕ ಕೊಹ್ಲಿ ತಮ್ಮ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ. ಅವರ ಹೆಸರಿನಲ್ಲಿ ಗರಿಷ್ಠ 15 ಅರ್ಧ ಶತಕಗಳು ದಾಖಲಾಗಿವೆ.
ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯ ಹೀಗಿತ್ತು
ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ದಕ್ಷಿಣ ಆಫ್ರಿಕಾಕ್ಕೆ 177 ರನ್ ಗಳ ಗುರಿ ನೀಡಿತು. ಇದು ಟಿ20 ವಿಶ್ವಕಪ್ ಫೈನಲ್ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ. ಭಾರತದ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿದರು, ಇದು ಟಿ 20 ವಿಶ್ವಕಪ್ ಫೈನಲ್ನಲ್ಲಿ ಗರಿಷ್ಠ ಆಟಗಾರರೊಬ್ಬರ ವೈಯಕ್ತಿಕ ಸ್ಕೋರ್ ಆಗಿದೆ.
177 ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಭಾರತದ ಪರ ಹಾರ್ದಿಕ್ ಪಾಂಡ್ಯ 3, ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷ್ದೀಪ್ ಸಿಂಗ್ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.
15 ವಿಕೆಟ್ ಕಬಳಿಸಿದ ಜಸ್ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 2024 ರ ಟಿ 20 ವಿಶ್ವಕಪ್ನಲ್ಲಿ ಬೌಲಿಂಗ್ ಎಕಾನಮಿ 4.17 ಆಗಿತ್ತು/ ಇದು ಟಿ 20 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಇದುವರೆಗಿನ ಅತ್ಯುತ್ತಮ ಸಾಧನೆಯ ಆಗಿದೆ.

