ಭಟ್ಕಳ-ಭಟ್ಕಳದ ಮುರಿನ್ ಕಟ್ಟೆಯಲ್ಲಿರುವ ಹಿಂದೂಗಳ ಪೂಜಾ ಸ್ಥಳಕ್ಕೆ ಹಾನಿ ಉಂಟಾದ ಘಟನೆಯನ್ನು ಖಂಡಿಸಿ, ಜೂನ್ 5, ಶುಕ್ರವಾರ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ಭಟ್ಕಳ ಬಂದ್‌ಗೆ ಕರೆ ನೀಡಲಾಗಿದೆ. ಜೊತೆಗೆ ಪ್ರತಿಭಟನಾ ಮೆರವಣಿಗೆಯನ್ನೂ ಹಮ್ಮಿಕೊಳ್ಳಲಾಗಿದೆ.

ಎಲ್ಲಾ ಹಿಂದೂ ಸಮಾಜದ ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸಮಸ್ತ ಹಿಂದೂ ಬಾಂಧವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ವಿನಂತಿಸಿಕೊಂಡಿದ್ದಾರೆ.

ಪ್ರತಿಭಟನಾ ಮೆರವಣಿಗೆಯು ಮಧ್ಯಾಹ್ನ 3 ಗಂಟೆಗೆ ಚನ್ನಪಟ್ಟಣ ಹನುಮಂತ ದೇವಸ್ಥಾನದಿಂದ ಆರಂಭವಾಗಿ ಹೂವಿನಪೇಟೆ ಮಾರುಕಟ್ಟೆ, ಮಾರಿಕಾಂಬಾ ದೇವಸ್ಥಾನ, ಹಳೆ ಬಸ್ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ಮಾರ್ಗಗಳ ಮೂಲಕ ಸಾಗಿಕೊಂಡು ಭಟ್ಕಳ ಎ.ಸಿ. ಕಚೇರಿಯನ್ನು ತಲುಪಲಿದೆ.ಅಲ್ಲಿ ಎ.ಸಿ. ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
