ಭಟ್ಕಳ,:ಜೂನ್ 10: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಭಟ್ಕಳ ವಿಧಾನಸಭಾ ಕ್ಷೇತ್ರದ ಬೂತ್ ಲೆವೆಲ್ ಏಜೆಂಟ್-1 (BLA-1) ಆಗಿ ಬಿಜೆಪಿ ಸಕ್ರಿಯ ಕಾರ್ಯಕರ್ತ ಹಾಗೂ ಸಂಘಟನಾ ಚತುರರಾದ ಪ್ರಮೋದ ಜೋಶಿ ಅವರನ್ನು ನೇಮಕ ಮಾಡಿ ಪಕ್ಷದ ವತಿಯಿಂದ ಆದೇಶ ಹೊರಡಿಸಲಾಗಿದೆ.

ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಮೋದ ಜೋಶಿ ಅವರು ಹಲವು ವರ್ಷಗಳಿಂದ ಬಿಜೆಪಿಯ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ, ಕಾರ್ಯಕರ್ತರೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯ ಹಾಗೂ ಪಕ್ಷದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಎಲ್‌ಎ-1 ಹುದ್ದೆಯು ಮತದಾರರ ಪಟ್ಟಿ ಪರಿಶೀಲನೆ, ಬೂತ್ ಮಟ್ಟದ ಸಂಘಟನೆ ಬಲಪಡಿಸುವುದು ಹಾಗೂ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿವಿಧ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ ಜೋಶಿ ಅವರ ನೇಮಕಾತಿ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ನೀಡಲಿದೆ ಎಂಬ ವಿಶ್ವಾಸವನ್ನು ಬಿಜೆಪಿ ಮುಖಂಡರು ವ್ಯಕ್ತಪಡಿಸಿದ್ದಾರೆ.
ಪ್ರಮೋದ ಜೋಶಿ ಅವರ ನೇಮಕಾತಿಯನ್ನು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸ್ವಾಗತಿಸಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
