ಭಟ್ಕಳ, : ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ಗುರುತಿಸಿಕೊಂಡಿರುವ ಭಟ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೀಪಕ್ ನಾಯ್ಕ್ ಅವರಿಗೆ 2025–26ನೇ ಸಾಲಿನ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ ಲಭಿಸಿದೆ.

ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ದೀಪಕ್ ನಾಯ್ಕ್ ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ತಮ್ಮ ಕಾರ್ಯಕ್ಷಮತೆಯಿಂದ ವಿಶೇಷ ಗುರುತನ್ನು ಮೂಡಿಸಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬಲಪಡಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ.
ಸೇವಾ ಅವಧಿಯಲ್ಲಿ ಹಲವು ಮಹತ್ವದ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಅವರು, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆ, ಸಾರ್ವಜನಿಕ ದೂರುಗಳ ತ್ವರಿತ ವಿಲೇವಾರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ.
ಅವರ ಸೇವಾ ಮನೋಭಾವ, ಕರ್ತವ್ಯನಿಷ್ಠೆ ಹಾಗೂ ಪೊಲೀಸ್ ಇಲಾಖೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆಯು 2025–26ನೇ ಸಾಲಿನ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ ನೀಡಿ ಗೌರವಿಸಿದೆ.
ಈ ಸಾಧನೆಗೆ ಪೊಲೀಸ್ ಇಲಾಖೆ, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ
