*ಭಟ್ಕಳದ ಕರಿಕಲ್ ನ ಧ್ಯಾನ ಮಂದಿರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮಕ್ಕೆ ಆಗಮಿಸಿ ಪರಮಪೂಜ್ಯ ಗುರುಗಳ ಆಶೀರ್ವಾದ ಪಡೆದ ಉತ್ತರ ಕನ್ನಡ ಜಿಲ್ಲೆಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ
ಭಟ್ಕಳ-ಭಟ್ಕಳದ ಕರಿಕಲ್ ನ ಧ್ಯಾನ ಮಂದಿರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಮಾನ್ಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಶನಿವಾರ ಆಗಮಿಸಿ ಪರಮಪೂಜ್ಯ ಗುರುಗಳ ಆಶೀರ್ವಾದ ಪಡೆದರು. ನಂತರ ಸಾಮೀಜಿ ಅವರು ಸಂಸದರಿಗೆ ಶಾಲು ಹೊದಿಸಿ ,ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ನಂತರ ಮಾತನಾಡಿದ ಸಂಸದರು ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಾಲೂಕಿನ ಕರಿಕಲ್ ನ ಶಾಖ ಮಠದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮ ಕೈಗೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಮತ್ತು ಭಟ್ಕಳದ ಸ್ವಾಮೀಜಿ ಅವರ ಶಿಶ್ಯರ ಮತ್ತು ಅಪಾರ ಭಕ್ತರ ಪುಣ್ಯ ಎಂದರು. ಸ್ವಾಮೀಜಿ ಅವರು ದೀಕ್ಷೆ ಪಡೆದ ನಂತರ ನಮ್ಮ ಹಿಂದೂ ಸನಾತನ ಧರ್ಮದ ಎಲ್ಲರ ಒಳಿತಿಗಾಗಿ ಮತ್ತು ಲೋಕ ಕಲ್ಯಾಣಕ್ಕಾಗಿ ಇಂತಹ ನೂರಾರು ಧರ್ಮಕಾರ್ಯ ಮಾಡಿ ನಮ್ಮ ಹಿಂದೂ ಸನಾತನ ಧರ್ಮದ ಉದ್ದಾರ ಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಮಟಾ ಶಾಸಕರಾದ ಶ್ರೀ ದಿನಕರ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್ ಎಸ್ ಹೆಗಡೆ, ಭಟ್ಕಳದ ಮಾಜಿ ಶಾಸಕರಾದ ಶ್ರೀ ಸುನಿಲ್ ನಾಯ್ಕ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯ್ಕ , ಬಿಜೆಪಿ ಮುಖಂಡ ಗೋವಿಂದ ನಾಯ್ಕ್, ಕೃಷ್ಣ ನಾಯ್ಕ, ಶ್ರೀಕಾಂತ್ ನಾಯ್ಕ್, ಬಿಜೆಪಿ ಭಟ್ಕಳ ತಾಲೂಕ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ್ ಹಾಗೂ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಆ ಬಿಜೆಪಿಯ ವಿವಿಧ ಸ್ತರದ ಜವಾಬ್ದಾರಿಯುಳ್ಳ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.