ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಸಾರಿಗೆ ಬಸ್ ಜೋಗ ಬಳಿ 80% ಬೆಂಕಿಗಾಹುತಿ
ಭಟ್ಕಳ: ಭಟ್ಕಳದಿಂದ ಪ್ರಯಾಣಿಕರನ್ನು ಹೊತ್ತು ಬೆಳ್ಳಿಗೆ 7.45 ಕ್ಕೆ ಭಟ್ಕಳದಿಂದ ಬೆಂಗಳೂರು ಕಡೆಗೆ ಸಾಗುತಿದ್ದ ಸಾರಿಗೆ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಭಟ್ಕಳದಿಂದ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ , ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಟ್ಕಳ ಡಿಪೋ ಮೆನೇಜರ ಮಾಹಿತಿ ನೀಡಿದ್ದಾರೆ. ಬಸ್ 80 %ಶೇಕಡಾ ಸಂಪೂರ್ಣ ವಾಗಿ ಸುಟ್ಟು ಹೋಗಿದೆ ಎಂದು ತಿಳಿಸಿದ್ದಾರೆ.