ಕಾರವಾರ-ಬ್ರಿಟಿಷರು ದಾಸ್ಯದಿಂದ ದೇಶವನ್ನು ಸ್ವಾತಂತ್ರö್ಯಗೊಳಿಸಲು ಹಲವಾರು ಮಹನೀಯರ ತಮ್ಮ ಬಲಿದಾನ ನೀಡಿದ್ದು, ಅವರ ಬಲಿದಾನದ ಫಲವಾಗಿ ಇಂದು ದೇಶದ ಜನರು ನೆಮ್ಮದಿ ಜೀವನ ಸಾಗಿಸಲು
ಸಾಧ್ಯವಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.
ಅವರು ಶುಕ್ರವಾರ ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 79 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದರು.ದೇಶದಾದ್ಯಂತ ಹಲವು ಮಹನೀಯರ ಬಲಿದಾನದಿಂದಾಗಿ ಇಂದು ಸ್ವಾತಂತ್ರೋತ್ಸವವನ್ನು ಆಚರಿಸಲು ಸಾಧ್ಯವಾಗಿದೆ.
ವೀರರಾಣಿ ಕಿತ್ತೂರ ರಾಣಿ ಚನ್ನಮ್ಮ, ಝಾನ್ಸಿ ರಾಣಿ ಲಕ್ಷಿö್ಮÃಬಾಯಿ ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರö್ಯಕ್ಕಾಗಿಬ್ರಿಟಿಷರೊಂದಿಗೆ ಹೋರಾಡಿ ವೀರ ಮರಣ ಹೊಂದಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ ಹಾಗೂ ರಾಷ್ಟçಪಿತ ಮಹಾತ್ಮ
ಗಾಂಧೀಜಿಯ ಅಹಿಂಸೆ ಮತ್ತು ಅಸಹಕಾರ ತತ್ವಗಳಿಂದ ಕೂಡಿದ ಚಳುವಳಿಗಳ ಮೂಲಕ ದೇಶದ ಇತಿಹಾಸ ಇಡೀ ಪ್ರಪಂಚಕ್ಕೆಮಾದರಿಯಾಗಿದೆ ಎಂದರು.
ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನವಾಗಿ ಯೋಜನೆಗಳನ್ನು ತಲುಪಿಸುವ ಮೂಲಕ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲು ನೆರವಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ಪ್ರತಿತಾಲೂಕಿನ ಜನತೆಗೆ ಸುಮಾರು ರೂ. 400 ಕೋಟಿ ರೂ ನೆರವು ದೊರೆಯುತಿದ್ದು, ಇದರ ಜೊತೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಹ ಪೂರಕವಾದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದ್ದು, ಕಾರ್ಮಿಕರ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಕಾರ್ಮಿಕ ಶಾಲೆ ತೆರೆಯುವ ಮೂಲಕ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದAತೆನೋಡಿಕೊಳ್ಳಲಾಗುವುದು ಹಾಗೂ ವಸತಿ ಶಾಲೆಗಳ ನಿರ್ಮಾಣಕ್ಕೆ ಕೂಡಾ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಅಭಿವೃದ್ಧಿ
ಕಾರ್ಯಗಳಿಗೆ ಪ್ರಥಮಾಧ್ಯತೆ ನೀಡಿದ್ದು ಇದರಲ್ಲಿ ಯಾವುದೇ ಸಮಸ್ಯೆ ತಲೆದೋರದಂತೆ ಎಲ್ಲಾ ರೀತಿಯ ನೆರವು ಒದಗಿಸಲಾಗುವುದುಎಂದರು.
ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರವಾಸಿ ತಾಣಗಳ ಸಮಗ್ರಮಾಹಿತಿಯುಳ್ಳ ಕಾಫಿ ಟೇಬಲ್ ಬುಕ್ ಬಿಡುಗಡೆ, ಉತ್ತರ ಕನ್ನಡ ಜಿಲ್ಲಾ ಪ್ರವಾಸಿ ತಾಣಗಳ ಕುರಿತು ಅಧಿಕೃತ ವೆಬ್‌ಸೈಟ್ ಹಾಗೂಸಾಮಾಜಿಕ ಜಾಲತಾಣಗಳಿಗೆ ಚಾಲನೆ ಮತ್ತು ಪ್ರವಾಸಿ ಮಿತ್ರರಿಗೆ ಸಮವಸ್ತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ನಗರ ಸಭೆ ಅಧ್ಯಕ್ಷ ರವಿರಾಜ್ ಚಂದ್ರಹಾಸ ಅಂಕೋಲೆಕರ,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲಿಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ,
ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿ ಶಂಕರ್, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝುಪಿಶಾನ್ ಹಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.ಪೊಲೀಸ್, ಅರಣ್ಯ, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ, ತಂಡಗಳಿAದ ಆಕರ್ಷಕ ಪಥ
ಸಂಚಲನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.