ಹೊನ್ನಾವರ: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ಯಶೋಧರ ನಾಯ್ಕ (69) ಅವರು ಇಂದು ಮುಂಬೈನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಹೊನ್ನಾವರ ತಾಲೂಕಿನ ಮಾಳ್ಕೊಡ ಮೂಲದವರಾಗಿದ್ದ ನಾಯ್ಕ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನಲ್ಲಿ ನೆಲೆಸಿ, ಸಾರಿಗೆ ಉದ್ಯಮದಲ್ಲಿ ಯಶಸ್ಸು ಗಳಿಸಿದ್ದರು. ನಂತರ ಅವರು ರಾಜಕೀಯಕ್ಕೂ ಪ್ರವೇಶಿಸಿದರು. ಭಟ್ಕಳದಿಂದ ಒಮ್ಮೆ ಜೆಡಿಎಸ್ ಅಭ್ಯರ್ಥಿಯಾಗಿ,ಮತೊಮ್ಮೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ 2 ಭಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸಿ ಸೋಲನ್ನು ಅನುಭವಿಸಿದರು. ನಂತರ ಕುಮಟಾದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಂತರ ಕಾಂಗ್ರೆಸ್ ಸೇರ್ಪಡೆಗೊಂಡು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದರು.
‘ಯಶೋಧರ ನಾಯ್ಕ ಟ್ರಸ್ಟ್’ ಕುಮಟಾ ಮತ್ತು ಹೊನ್ನಾವರ ದ ಸಾವಿರಾರು ಜನರಿಗೆ ಉದ್ಯೋಗ ನೀಡಿ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ರಾಜಕೀಯ ವಲಯ ಸೇರಿದಂತೆ ಅನೇಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.