ಕುಮಟ: ತಾಲೂಕಿನ ಅರಣ್ಯವಾಸಿಗಳ ಸಮಸ್ಯೆಗಳ ಚರ್ಚಿಸುವ ಕುರಿತು ಸೆ.೨೪ ಮಂಗಳವಾರ ಮುಂಜಾನೆ ೧೦-೩೦ ಕ್ಕೆ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಕಛೇರಿಯಲ್ಲಿ ಹಿರಿಯ ಅಧಿಕಾರಿಯೊಂದಿಗೆ ಸಮಾಲೋಚಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕುಮಟದಲ್ಲಿ ಅರಣ್ಯವಾಸಿಗಳ ಸಾಗುವಳಿಗೆ ಸಂಬAಧಿಸಿ ಅರಣ್ಯ ಸಿಬ್ಬಂಧಿಗಳಿAದ ವ್ಯತಿರಿಕ್ತವಾಗಿ ಕಾರ್ಯ ಜರಗುತ್ತಿರುವದರಿಂದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲು ಅವಕಾಶ ಕೋರಿ ಅರಣ್ಯ ಸಂರಕ್ಷಣಾ ಅಧಿಕಾರಿ ಶಿರಸಿ ಅವರಿಗೆ ಪತ್ರ ಬರೆದಿದ್ದು ಅರಣ್ಯವಾಸಿಗಳ ಸಮಸ್ಯೆಗಳನ್ನು ಚರ್ಚಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಆಸಕ್ತರು ಸೆ. ೨೪ ರ ಮುಂಜಾನೆ ೧೦-೩೦ ಕ್ಕೆ ಹಳೇ ತಹಶೀಲ್ದಾರ ಕಛೇರಿ ಆವರಣದಲ್ಲಿ ಆಗಮಿಸಬೇಕೇಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.