
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಣ್ಯದಲ್ಲಿ ನೂರಾರು ಗೋವುಗಳ ಅಸ್ಥಿಪಂಜರ ಸಿಕ್ಕ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆತಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದ್ದು ,ಇನ್ನಷ್ಟು ಗೋಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರು ಸಿದ್ಧವಾಗಿದ್ದಾರೆ. ಇದರೊಂದಿಗೆ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣದ ರಹಸ್ಯವನ್ನು ಕೊನೆಗೂ ಪೊಲೀಸರು ಬಯಲಿಗೆಳೆದಂತಾಗಿದೆ.