
ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ (ರಿ), ಬೆಂಗಳೂರು ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ , ಪೊಲೀಸ್ ವಾರ್ತೆ ಪತ್ರಿಕೆ ಗೌರವ ಸಂಪಾದಕ ಕೆ.ಆರ್.ಹರೀಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ.ಕರ್ನಾಟಕ ಪ್ರೆಸ್ ಕ್ಲಬ್‌ನ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಅಧ್ಯಕ್ಷ ರಮೇಶ್. ಶೆಟ್ಟಿ ಅವರ ಶಿಫಾರಸಿನ ಹಿನ್ನೆಲೆಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪತ್ರಿಕಾ ವೃತ್ತಿಯ ಮೂಲ ಮೌಲ್ಯಗಳಾದ ನ್ಯಾಯ, ಸತ್ಯ, ನೈತಿಕತೆ ಹಾಗೂ ಪತ್ರಿಕಾ ಧರ್ಮವನ್ನು ಗಮನದಲ್ಲಿಟ್ಟುಕೊಂಡು ಹೊಸ ಜವಾಬ್ದಾರಿಯನ್ನು ನಿರ್ವಹಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಪತ್ರಕರ್ತರ ಹಿತಾಸಕ್ತಿಗೆ ಆದ್ಯತೆಬೆಂಗಳೂರು ನಗರ ಜಿಲ್ಲೆಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್‌ನ ಸಂಘಟನೆಯನ್ನು ಮತ್ತಷ್ಟು ವಿಸ್ತರಿಸುವುದು ಹಾಗೂ ಪತ್ರಕರ್ತರನ್ನು ಸಂಘಟಿಸುವುದು ನೂತನ ಜಿಲ್ಲಾ ಪದಾಧಿಕಾರಿಗಳ ಪ್ರಮುಖ ಹೊಣೆಗಾರಿಕೆಯಾಗಲಿದೆ. ಪತ್ರಕರ್ತರು ವೃತ್ತಿಯಲ್ಲಿ ಎದುರಿಸುವ ಸಮಸ್ಯೆಗಳು ಮತ್ತು ಸಂಕಷ್ಟಗಳ ಸಂದರ್ಭದಲ್ಲಿ ಅಗತ್ಯ ನೆರವು ಹಾಗೂ ಸಹಕಾರ ಒದಗಿಸುವ ನಿಟ್ಟಿನಲ್ಲಿಯೂ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ.ಇದರ ಜತೆಗೆ ಪತ್ರಕರ್ತರ ಹಕ್ಕುಗಳು ಮತ್ತು ವೃತ್ತಿಪರ ಹಿತಾಸಕ್ತಿಗಳ ಪರವಾಗಿ ಧ್ವನಿ ಎತ್ತುವುದು, ಅವರ ಸಮಸ್ಯೆಗಳನ್ನು ಸಂಬಂಧಪಟ್ಟ ವೇದಿಕೆಗಳ ಗಮನಕ್ಕೆ ತರುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಬೇಕಿದೆ.
ಸಾಮಾಜಿಕ ಸಮಸ್ಯೆಗಳಿಗೂ ಧ್ವನಿ
ಸಮಾಜದ ಬಡವರು ಹಾಗೂ ದುರ್ಬಲ ವರ್ಗದ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳನ್ನು ಮುನ್ನೆಲೆಗೆ ತರುವುದು ಮತ್ತು ಭ್ರಷ್ಟಾಚಾರ ಹಾಗೂ ಅಕ್ರಮಗಳ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಗಳಿಗೂ ಒತ್ತು ನೀಡುವಂತೆ ಸಂಘಟನೆ ಸೂಚಿಸಿದೆ.
ಹೊಸ ಜವಾಬ್ದಾರಿಯೊಂದಿಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಪತ್ರಕರ್ತರ ಸಂಘಟನೆಯನ್ನು ಬಲಪಡಿಸುವುದರ ಜತೆಗೆ ರಾಜ್ಯ ಮಟ್ಟದಲ್ಲಿ ಪತ್ರಕರ್ತರ ಹಿತಾಸಕ್ತಿಗಾಗಿ ಪರಿಣಾಮಕಾರಿ ರೀತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಕರ್ನಾಟಕ ಪ್ರೆಸ್ ಕ್ಲಬ್ ವ್ಯಕ್ತಪಡಿಸಿದೆ.ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ , ಪೊಲೀಸ್ ವಾರ್ತೆ ಪತ್ರಿಕೆ ಸಂಪಾದಕ ಸುಭಾಷ್.ಆರ್.ಶೆಟ್ಟಿ, ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ
ರಮೇಶ್. ಶೆಟ್ಟಿ, ಕರ್ನಾಟಕ ಪ್ರೆಸ್ ಕ್ಲಬ್ ಕರಾವಳಿ ಕರ್ನಾಟಕ ಅಧ್ಯಕ್ಷ ಕುಮಾರ್ .ನಾಯ್ಕ್, ಪೋಲೀಸ್ ವಾರ್ತೆ ಶ್ರೀನಿವಾಸ್ ಉಪಸ್ಥಿತರಿದ್ದರು.
