ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್‌ನ ಬೆಂಗಳೂರು ನಗರ ಪದಾಧಿಕಾರಿಗಳ ಸಭೆ ಬೆಂಗಳೂರಿನ ಕಾನಿಷ್ಕ ಹೋಟೆಲ್‌ನಲ್ಲಿ ಶುಕ್ರವಾರ ಸಂಜೆ ನಡೆಯಿತು. ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಿತು.ಸಭೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಎಸ್. ರಮೇಶ್, ಉಪಾಧ್ಯಕ್ಷ ನರಸಿಂಹರಾಜು, ಕಾರ್ಯಾಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ರವಿಚಂದ್ರ ಹಾಗೂ ಖಜಾಂಚಿ ಮಲ್ಲೇಶ್ ಗೌಡ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಸಂಘಟನೆಯ ಪ್ರಸ್ತುತ ಕಾರ್ಯಚಟುವಟಿಕೆಗಳು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಹಾಗೂ ಸದಸ್ಯತ್ವ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಸಂಘಟನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಪದಾಧಿಕಾರಿಗಳು ಒಮ್ಮತದ ನಿರ್ಧಾರ ಕೈಗೊಂಡರು.
ಇದರ ಜೊತೆಗೆ ಸಂಘಟನೆಯ ಕಾರ್ಯಯೋಜನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ನಿರಂತರವಾಗಿ ಚರ್ಚೆ ನಡೆಸಲು ಪ್ರತಿ 15 ದಿನಗಳಿಗೊಮ್ಮೆ ಪದಾಧಿಕಾರಿಗಳ ಸಭೆ ನಡೆಸುವಂತೆ ತೀರ್ಮಾನಿಸಲಾಯಿತು.

ಸಂಘಟನೆಯ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಸದಸ್ಯರ ಸಹಭಾಗಿತ್ವದೊಂದಿಗೆ ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.
