ಶಿರಸಿ:ರಾಜ್ಯದ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಭAಧಿಸಿದ ಸಮಸ್ಯೆಗಳನ್ನ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಗಮನ್ಕಕೆ ತರಲಾಯಿತು. ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಕಾನೂನುಸಚಿವ ಎಚ್ಕೆ ಪಾಟೀಲ್ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಮನವಿ ಮೂಲಕ ಅವರ ಗಮನಕ್ಕೆ ತರಲಾಯಿತು ಎಂದು ರವೀಂದ್ರ ನಾಯ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳ ಭೂಮಿ ಹಕ್ಕಿನ ಸಮಸ್ಯೆಗೆ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದ್ದು, ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿ ಸರ್ಕಾರ ಸಕ್ರಿಯೆವಾಗಿದೆ ಎಂದು ಅವರು ತಿಳಿಸಿದರು. ಶೀಘ್ರದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು ಎಂದು ಅವರು ತಿಳಿಸಿದ್ದಾರೆ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.
ನಿಯೋಗದಲ್ಲಿ ವಿವಿಧ ಜಿಲ್ಲೆಯ ಪ್ರಮುಖರಾದ ಬೋರಯ್ಯ, ರಾಮು, ಶಿವಣ್ಣ ಚಿತ್ರದುರ್ಗ, ಶಂಕರ ಕೊಪ್ಪ, ಶಿವಾನಂದ ಜೋಗಿ ಮುಂತಾದವರು ಉಪಸ್ಥಿತರಿದ್ದರು ಎಂದು ಅವರು ತಿಳಿಸಿದರು.