ಭಟ್ಕಳ-ಪುರಸಭೆ ಮುಖ್ಯಾಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
ನಿಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ. ಒಳಚರಂಡಿ ಕಾಮಗಾರಿಗಾಗಿ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರು ಈಗಾಗಲೇ 2 ಲಕ್ಷ ಮುಂಗಡ ಲಂಚ ಕೂಡ ಪಡೆದಿದರಂತೆ.
ಈ ವೇಳೆ ಭಟ್ಕಳ ಪುರಸಭೆ ಕಚೇರಿಯಲ್ಲಿಯೇ ನೀಲಕಂಠ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಆರೋಪಿಯನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್.ಪಿ ನೇತೃತ್ವದಲ್ಲಿ ದಾಳಿ ನಡೆದಿತ್ತು.