ಬೆಂಗಳೂರು ನಗರದ ಮಧ್ಯಭಾಗದಲ್ಲಿ ಶನಿವಾರ ರಾತ್ರಿ ಸಂಭವಿಸಿದ ದಾರುಣ ಅಪಘಾತದಲ್ಲಿ ದಂಪತಿಯೋರ್ವರು ಪ್ರಾಣ ಕಳೆದುಕೊಂಡಿದ್ದಾರೆ. ಶಾಂತಿನಗರ ಬಸ್ ನಿಲ್ದಾಣದ ಹತ್ತಿರ ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಸಿಗ್ನಲ್ ಬಳಿ ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಭಟ್ಕಳ ಮೂಲದ ಬಂದರ್ ರಸ್ತೆಯ ನಿವಾಸಿಗಳಾದ ದಂಪತಿಗಳಾದ ಇಸ್ಮಾಯಿಲ್ ಮತ್ತು ಸಾಮೀನಾ ಅವರು ಸಿಗ್ನಲ್ಲ್ಲಿ ಹಸಿರು ಬಣ್ಣ ಬದಲಾವಣೆಗಾಗಿ ನಿಂತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತೀವ್ರ ರಭಸದಿಂದ ಸಾಗಿದೆದ ಆಂಬುಲೆನ್ಸ್ ಮೊದಲು ಕೆಲವು ಬೈಕ್‌ಗಳಿಗೆ ಗುದ್ದಿ ಬಳಿಕ ಪಲ್ಟಿಯಾದ್ದು, ದಂಪತಿಗೆ ತೀವ್ರ ಗಾಯವಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಬಳಿಕ ಆಂಬುಲೆನ್ಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದರೂ, ವಿಲ್ಸನ್ ಗಾರ್ಡನ್ ಟ್ರಾಫಿಕ್ ಪೊಲೀಸರು ತನಿಖೆ ಆರಂಭಿಸಿ ಭಾನುವಾರ ಬೆಳಗ್ಗೆ ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ವೇಗ ಮತ್ತು ನಿಯಂತ್ರಣ ತಪ್ಪಿದ ಚಾಲನೆ ಅಪಘಾತಕ್ಕೆ ಕಾರಣವೆಂದು ಶಂಕಿಸಲಾಗಿದೆ.

