ಭಟ್ಕಳ: ಹೆಬಳೆ ಸಮೀಪದ ಹೊನ್ನೆಗದ್ದೆ–ತೆಂಗಿನಗುಂಡಿ ರಸ್ತೆಯಲ್ಲಿ ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೀನುಗಾರರೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.ಮೃತರನ್ನು ವೆಂಕಟಾಪುರದ ನಿವಾಸಿ ಲೋಕೇಶ್ ಪಾಂಡುರಂಗ ಮೊಗೇರ (33) ಎಂದು ಗುರುತಿಸಲಾಗಿದೆ.

ಲೋಕೇಶ್ ಅವರು ರಾಷ್ಟ್ರೀಯ ಹೆದ್ದಾರಿ 66ರಿಂದ ತೆಂಗಿನಗುಂಡಿ ಮಾರ್ಗವಾಗಿ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಹೊನ್ನೆಗದ್ದೆ ಬಳಿ ವಾಹನದ ಮೇಲಿನ ನಿಯಂತ್ರಣ ತಪ್ಪಿದೆ. ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಅವರಿಗೆ ತಲೆಗೆ ತೀವ್ರ ಗಾಯಗಳಾಗಿದ್ದವು.ಅಪಘಾತದ ಬಳಿಕ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆದರೆ ಗಾಯಗಳ ತೀವ್ರತೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
