• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, November 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಲಾಸಿರಿ ಪ್ರಶಸ್ತಿಗೆ ಭಾಜನರಾದ ಡಾ. ಆರ್. ನರಸಿಂಹ ಮೂರ್ತಿ; ಸಾಹಿತ್ಯ ಸಂಭ್ರಮಕ್ಕೆ ಸಾಕ್ಷಿಯಾದ ಕಾವ್ಯೋತ್ಸವ:ಭಟ್ಕಳದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ – ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ, ಕವಿಗಳಿಂದ ಸ್ವರಚಿತ ಕವಿತೆಗಳ ವಾಚನ

Kannada News Desk by Kannada News Desk
November 13, 2026
in ಉತ್ತರ ಕನ್ನಡ
0
ಕಲಾಸಿರಿ ಪ್ರಶಸ್ತಿಗೆ ಭಾಜನರಾದ ಡಾ. ಆರ್. ನರಸಿಂಹ ಮೂರ್ತಿ; ಸಾಹಿತ್ಯ ಸಂಭ್ರಮಕ್ಕೆ ಸಾಕ್ಷಿಯಾದ ಕಾವ್ಯೋತ್ಸವ:ಭಟ್ಕಳದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ – ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ, ಕವಿಗಳಿಂದ ಸ್ವರಚಿತ ಕವಿತೆಗಳ ವಾಚನ
0
SHARES
29
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯದ ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉದ್ದೇಶದಿಂದ ಭಟ್ಕಳದ ಚಿತ್ರಾಪುರ ರಸ್ತೆಯಲ್ಲಿರುವ ಸಾಹಿತಿ ಶ್ರೀಧರ ಶೇಟ್ ಅವರ ನಿವಾಸ ‘ಕಲಾಸಿರಿ’ಯಲ್ಲಿ ವಿಶೇಷ ಸಾಹಿತ್ಯಿಕ ಕಾರ್ಯಕ್ರಮ ನಡೆಯಿತು.
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚಿತ್ರಾಪುರದ ಕಲಾಸಿರಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ‘ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ’ ಸರಣಿಯ ಭಾಗವಾಗಿ ಡಾ. ಆರ್. ವಿ. ಸರಾಫ್ ಸ್ಮರಣೆ, ಕಲಾಸಿರಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಕಾವ್ಯೋತ್ಸವವನ್ನು ಆಯೋಜಿಸಲಾಗಿತ್ತು.
ಸಾಹಿತಿ ನಾರಾಯಣ ಯಾಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಲಾಸಿರಿ ಪ್ರತಿಷ್ಠಾನವು ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ತನ್ನ ಮನೆಯ ಆವರಣದಲ್ಲೇ ಕಾವ್ಯೋತ್ಸವ ಆಯೋಜಿಸುತ್ತಿರುವುದು ವಿಶೇಷ ಸಂಗತಿ ಎಂದರು. ಸಾಹಿತ್ಯ ಮತ್ತು ಕಲೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಾಧಕರನ್ನು ಗುರುತಿಸಿ ಗೌರವಿಸುವ ಶ್ರೀಧರ ಶೇಟ್ ಕುಟುಂಬದ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ವೇದಿಕೆಗಳಿಂದ ಹೊಸ ಕವಿಗಳು ಹಾಗೂ ಉತ್ತಮ ಕವಿತೆಗಳು ಬೆಳಕಿಗೆ ಬರಲಿ ಎಂದು ಆಶಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ, ಈ ವರ್ಷದ ಕಲಾಸಿರಿ ಪ್ರಶಸ್ತಿಯನ್ನು ಶಿಕ್ಷಣ ತಜ್ಞ ಹಾಗೂ ಸಾಹಿತ್ಯ-ಕಲಾ ಪೋಷಕರಾದ ಡಾ. ಆರ್. ನರಸಿಂಹ ಮೂರ್ತಿ ಅವರಿಗೆ ನೀಡಿ ಗೌರವಿಸಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರು.
ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ನೆರವಾದವರನ್ನು ಸ್ಮರಿಸಿ ಗೌರವಿಸುವುದು ಹಾಗೂ ಸಾಹಿತ್ಯಾಸಕ್ತರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಕಾವ್ಯೋತ್ಸವ ನಡೆಸುವುದು ಉತ್ತಮ ಸಂಪ್ರದಾಯವಾಗಿದೆ. ಇಂತಹ ಚಟುವಟಿಕೆಗಳು ಇತರ ಸಂಘಟನೆಗಳಿಗೂ ಮಾದರಿಯಾಗಬೇಕು ಎಂದು ಅಭಿಪ್ರಾಯಪಟ್ಟರು. ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರನ್ನೂ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಡಾ. ಆರ್. ನರಸಿಂಹ ಮೂರ್ತಿಗೆ 2026ರ ಕಲಾಸಿರಿ ಪ್ರಶಸ್ತಿ

ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ನಿವೃತ್ತ ಪ್ರಾಂಶುಪಾಲ ಹಾಗೂ ಶಿಕ್ಷಣ ತಜ್ಞ ಡಾ. ಆರ್.ನರಸಿಂಹ ಮೂರ್ತಿ ಅವರಿಗೆ 2026ನೇ ಸಾಲಿನ ಕಲಾಸಿರಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಗೌರವ ಸ್ವೀಕರಿಸಿ ಮಾತನಾಡಿದ ಡಾ. ನರಸಿಂಹ ಮೂರ್ತಿ, ಶಿಕ್ಷಕರ ಜವಾಬ್ದಾರಿ ಪಠ್ಯ ಬೋಧನೆಗೆ ಮಾತ್ರ ಸೀಮಿತವಾಗಬಾರದು. ತರಗತಿಯ ಹೊರಗೂ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಗೆ ನೆರವಾಗಬೇಕು. ಅವರಲ್ಲಿ ಮೂಡುವ ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವುದರ ಜೊತೆಗೆ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವುದು ಶಿಕ್ಷಕರ ಕರ್ತವ್ಯವಾಗಿದೆ ಎಂದು ಹೇಳಿದರು.ಕಲಾಸಿರಿ ಪ್ರತಿಷ್ಠಾನದಿಂದ ದೊರೆತ ಗೌರವ ಸಂತಸ ತಂದಿದೆ ಎಂದು ತಿಳಿಸಿದ ಅವರು, ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿರಂತರ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಪ್ರಶಂಸಿಸಿದರು.

ಗಣ್ಯರಿಗೆ ಗೌರವ ಸನ್ಮಾನ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ, ಶಿರಾಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟೇಶ್ ನಾಯ್ಕ, ಸಾಹಿತಿ ಮಾನಾಸುತ ಶಂಭು ಹೆಗಡೆ, ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ, ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಕೆ. ಬಿ. ಮಡಿವಾಳ ಹಾಗೂ ಉಳ್ಮಣ್ ಶಾಲೆಯ ಮುಖ್ಯಾಧ್ಯಾಪಕ ಡಿ. ಐ. ಮೊಗೇರ್ ಅವರಿಗೆ ಗೌರವ ಸನ್ಮಾನ ನೆರವೇರಿಸಲಾಯಿತು.ಸನ್ಮಾನ ಸ್ವೀಕರಿಸಿದ ಗಣ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸ್ವರಚಿತ ಕವಿತೆಗಳ ಮೂಲಕ ಗಮನ ಸೆಳೆದ ಕವಿಗಳು

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಕನ್ನಡ ಕಾವ್ಯೋತ್ಸವದಲ್ಲಿ ಹಲವು ಕವಿಗಳು ತಮ್ಮ ಸ್ವರಚಿತ ಕವಿತೆಗಳನ್ನು ವಾಚಿಸಿ ಸಾಹಿತ್ಯಾಸಕ್ತರ ಗಮನ ಸೆಳೆದರು.
ಎಂ. ಡಿ. ಪಕ್ಕಿ, ಕೃಷ್ಣ ಮೊಗೇರ್ ಅಳ್ವೆಕೋಡಿ, ಸುರೇಶ ಮುರ್ಡೇಶ್ವರ, ಜಯಶ್ರೀ ಆಚಾರಿ, ಸುಧಾ ಭಟ್, ಸುಮಲತಾ ನಾಯ್ಕ, ರಾಘವೇಂದ್ರ ಮಡಿವಾಳ, ಹೇಮಲತಾ ಶ್ರೀಧರ್, ಕೆ. ಎಲ್. ಶಾನಭಾಗ್, ನಂದನ ನಾಯ್ಕ, ರಾಜೀವಿ ಮೊಗೇರ್, ಶಂಕರ್ ನಾಯ್ಕ, ನಾಗರತ್ನ ನಾಯ್ಕ ಹಾಗೂ ತೇಜ ಮೊಗೇರ್ ಸೇರಿದಂತೆ ಹಲವು ಕವಿಗಳು ಕಾವ್ಯ ವಾಚನದಲ್ಲಿ ಪಾಲ್ಗೊಂಡರು.

ಗಣ್ಯರ ಉಪಸ್ಥಿತಿ

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಹಾಗೂ ಕಲಾಸಿರಿ ಪ್ರತಿಷ್ಠಾನದ ಸಂಚಾಲಕ ಸಾಹಿತಿ ಶ್ರೀಧರ ಶೇಟ್ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಶಿಕ್ಷಕಿ ಹಾಗೂ ಕಲಾಸಿರಿ ಪ್ರತಿಷ್ಠಾನದ ಕಾರ್ಯದರ್ಶಿ ಹೇಮಲತಾ ಶ್ರೀಧರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಸಾಹಿತಿ ಹಾಗೂ ಜನಪ್ರಿಯ ವೈದ್ಯರಾಗಿದ್ದ ಡಾ. ಆರ್. ವಿ. ಸರಾಫ್ ಅವರ ಸ್ಮರಣಾರ್ಥ ಮೌನಾಚರಣೆ ನಡೆಸಿ ಗೌರವ ಸಲ್ಲಿಸಲಾಯಿತು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ ಕೆರೆಕಟ್ಟೆ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಪೂರ್ಣಿಮಾ ಕರ್ಕಿಕರ್, ವಿನಾಯಕ ಅವಧಾನಿ, ಗಜಾನನ ಹೆಗಡೆ, ತಿಮ್ಮಪ್ಪ ದೇವಾಡಿಗ, ಗಣೇಶ್ ಗೌಡ, ನಾರಾಯಣ ದೇವಾಡಿಗ, ರಾಜೇಶ ನಾಯ್ಕ, ವೆಂಕಟೇಶ್ ಕೊಡಿಹಿತ್ತಲು, ನಾರಾಯಣ ಮೊಗೇರ್, ವಿನಾಯಕ ಚಿತ್ರಾಪುರ, ಡಾ. ಶ್ರೇಯಾಂಕ್, ಶ್ರೀಶಾ, ಪ್ರಣತಿ, ಲಕ್ಷ್ಮೀ, ಶೀತಲಾ ಚಿತ್ರಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಸಾಹಿತ್ಯ ಸಾಧಕರಿಗೆ ಗೌರವ, ಕವಿಗಳಿಗೆ ವೇದಿಕೆ ಹಾಗೂ ಕನ್ನಡದ ಸಾಂಸ್ಕೃತಿಕ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸಿದ ಈ ಕಾರ್ಯಕ್ರಮ ಸಾಹಿತ್ಯಾಸಕ್ತರ ಪಾಲಿಗೆ ಅರ್ಥಪೂರ್ಣ ಸಮಾಗಮವಾಯಿತು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಭಟ್ಕಳದಲ್ಲಿ ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೆ 33 ವರ್ಷದ ಮೀನುಗಾರ ಸಾವು

Kannada News Desk

Kannada News Desk

ಕ್ಯಾಲೆಂಡರ್

November 2026
MTWTFSS
 1
2345678
9101112131415
16171819202122
23242526272829
30 
« Oct    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d