• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, November 25, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಲಿ: ಅನಂತಮೂರ್ತಿ ಹೆಗಡೆ ಆಗ್ರಹ 15 ಸಾವಿರ ರೂ. ಗೌರವಧನ, ಸೇವಾ ಭದ್ರತೆ ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ಬೆಂಬಲ – ಸರ್ಕಾರದ ವಿಳಂಬ ನೀತಿಗೆ ಟೀಕೆ

Kannada News Desk by Kannada News Desk
November 25, 2026
in ಉತ್ತರ ಕನ್ನಡ
0
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಲಿ: ಅನಂತಮೂರ್ತಿ ಹೆಗಡೆ ಆಗ್ರಹ 15 ಸಾವಿರ ರೂ. ಗೌರವಧನ, ಸೇವಾ ಭದ್ರತೆ ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ಬೆಂಬಲ – ಸರ್ಕಾರದ ವಿಳಂಬ ನೀತಿಗೆ ಟೀಕೆ
0
SHARES
5
VIEWS
WhatsappTelegram Share on FacebookShare on TwitterLinkedin


ಶಿರಸಿ:ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಅವರ ನ್ಯಾಯಯುತ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಒತ್ತಾಯಿಸಿದ್ದಾರೆ.


ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಶಾ ಕಾರ್ಯಕರ್ತೆಯರು ಒಂದು ವಾರಕ್ಕೂ ಹೆಚ್ಚು ಕಾಲದಿಂದ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರದಿಂದ ನಿರೀಕ್ಷಿತ ಸ್ಪಂದನೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯದ ಕಾಳಜಿ ವಹಿಸುವುದರಿಂದ ಹಿಡಿದು ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸೇವೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ತಲುಪಿಸುವವರೆಗೆ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಇಂತಹ ಜವಾಬ್ದಾರಿಯುತ ಕೆಲಸ ನಿರ್ವಹಿಸುವವರಿಗೆ ಸಮರ್ಪಕ ಗೌರವಧನ, ಆರ್ಥಿಕ ಭದ್ರತೆ ಮತ್ತು ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.


ಪ್ರಸ್ತುತ ಆಶಾ ಕಾರ್ಯಕರ್ತೆಯರಿಗೆ ದೊರೆಯುತ್ತಿರುವ ಸುಮಾರು 5 ಸಾವಿರ ರೂ. ಗೌರವಧನ ಇಂದಿನ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ. ಹೀಗಾಗಿ ಮಾಸಿಕ ಗೌರವಧನವನ್ನು ಕನಿಷ್ಠ 15 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ತಮ್ಮ ಬೆಂಬಲವಿದ್ದು, ಅವರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಆಶಾ ಕಾರ್ಯಕರ್ತೆಯರ ಕುರಿತು ಮಾತನಾಡುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಉಲ್ಲೇಖಿಸಿರುವುದು ಎರಡೂ ಕಾರ್ಯಕರ್ತೆಯರ ನಡುವಿನ ವ್ಯತ್ಯಾಸದ ಬಗ್ಗೆ ಸರ್ಕಾರದ ಗಮನ ಸೆಳೆದಿದೆ ಎಂದು ಹೆಗಡೆ ಟೀಕಿಸಿದ್ದಾರೆ.
ಮುಖ್ಯಮಂತ್ರಿಗಳ ನಿವಾಸದ ಮರು ವಿನ್ಯಾಸಕ್ಕಾಗಿ ದೊಡ್ಡ ಮೊತ್ತದ ಹಣ ವೆಚ್ಚ ಮಾಡಲು ಸರ್ಕಾರ ಮುಂದಾಗುತ್ತದೆ. ಆದರೆ ಬಿಸಿಲು, ಮಳೆ ಎನ್ನದೆ ಜನರ ಆರೋಗ್ಯ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಅಗತ್ಯ ಅನುದಾನ ಒದಗಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಸರ್ಕಾರಿ ಯೋಜನೆಗಳ ಮಾಹಿತಿಯನ್ನು ದಾಖಲಿಸಲು ಸಮರ್ಪಕ ಮೊಬೈಲ್ ಸೌಲಭ್ಯವನ್ನೂ ಎದುರಿಸುತ್ತಿದ್ದಾರೆ. ಸದನದಲ್ಲಿ ಹೆಚ್ಚುವರಿ 1,500 ರೂ. ನೀಡುವ ಕುರಿತು ಭರವಸೆ ನೀಡಲಾಗಿದ್ದರೂ, ಅದರ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳು

ಆಶಾ ಕಾರ್ಯಕರ್ತೆಯರಿಗೆ ಆರು ತಿಂಗಳ ವೇತನ ಸಹಿತ ಹೆರಿಗೆ ರಜೆ ಮಂಜೂರು ಮಾಡಬೇಕು. ಸೇವೆಯಿಂದ ಕೈಬಿಡಲಾಗಿರುವ ಆಶಾ ಸುಗಮಕಾರರನ್ನು ಪುನಃ ನೇಮಕ ಮಾಡಿಕೊಳ್ಳಬೇಕು. 2024-25ನೇ ಸಾಲಿನ ಹೆಚ್ಚುವರಿ 1,500 ರೂ. ಮಾಸಿಕ ಪ್ರೋತ್ಸಾಹಧನ ಸೇರಿದಂತೆ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಇದಲ್ಲದೆ, ಸೇವೆಯಿಂದ ನಿವೃತ್ತರಾಗುವ ಸಂದರ್ಭದಲ್ಲಿ 5 ಲಕ್ಷ ರೂ. ಇಡಿಗಂಟು ನೀಡುವುದು, ಸೂಕ್ತ ಸೇವಾ ಭದ್ರತೆ ಕಲ್ಪಿಸುವುದು ಸೇರಿದಂತೆ ಪ್ರತಿಭಟನಾನಿರತ ಕಾರ್ಯಕರ್ತೆಯರು ಮುಂದಿಟ್ಟಿರುವ ಎಲ್ಲ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಅಪರಿಚಿತ ವಾಹನ ಡಿಕ್ಕಿಗೆ ಎಳೆಯ ಚಿರತೆ ಬಲಿ; ಸ್ಥಳದಲ್ಲೇ ದಾರುಣ ಸಾವು

Kannada News Desk

Kannada News Desk

ಕ್ಯಾಲೆಂಡರ್

November 2026
MTWTFSS
 1
2345678
9101112131415
16171819202122
23242526272829
30 
« Oct    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d