• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಪಕ್ಷ- ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ನಳಿನ್ ಕುಮಾರ ಕಟೀಲ್ ಹೇಳಿಕೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 20, 2022
in ಬ್ರೇಕಿಂಗ್ ನ್ಯೂಸ್
0
ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಪಕ್ಷ- ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ನಳಿನ್ ಕುಮಾರ ಕಟೀಲ್ ಹೇಳಿಕೆ
0
SHARES
329
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2022/12/VID-20221220-WA0209.mp4

ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಪಕ್ಷ- ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ನಳಿನ್ ಕುಮಾರ ಕಟೀಲ್ ಹೇಳಿಕೆ

ಮುರುಡೇಶ್ವರ- ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಪರ ಮೃದು ದೊರಣೆ ಹೊಂದಿದೆ. ಆದದರಿಂದ ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸದಿಂದ ನುಡಿದರು.


ಭಯೋತ್ಪಾದನೆ, ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣಕ್ಕಾಗಿ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಜಾರಿಗೊಳಿಸಿದೆ. ಜಾತಿ, ರಾಜ್ಯ, ಪ್ರಾಂತ ಹೀಗೆ ಒಡೆದು ಆಳುವ ನೀತಿ ಕಾಂಗ್ರೆಸ್ ಪಕ್ಷದ್ದು. ಕಾಂಗ್ರೆಸ್‍ನಿಂದ ಭಯೋತ್ಪಾದನೆ, ಉಗ್ರವಾದಕ್ಕೆ ಪೋಷಣೆ ಲಭಿಸಿತ್ತು. ಭಯೋತ್ಪಾದನೆ, ಉಗ್ರವಾದ ನಿಗ್ರಹಿಸುವ ಕೆಲಸವನ್ನು ಬಿಜೆಪಿ ಸರಕಾರ ಮಾಡಿದೆ ಎಂದು ವಿವರಿಸಿದರು.ಮುರುಡೇಶ್ವರದಲ್ಲಿ ಆರಂಭವಾದ ಬಿಜೆಪಿ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಸಿಎಂ ಆಗಲು 5 ಜನರಿದ್ದಾರೆ. ಹಿಂದೆ ಇಬ್ಬರಿದ್ದರು. ಕಾಂಗ್ರೆಸ್ ಬೀದಿಜಗಳ ಗಮನಿಸಿದ ಜನತೆ ಆ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸುವುದು ಖಚಿತ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ನುಡಿದರು.
ಡಿಕೆಶಿ ಕೊಟ್ಟ ಸೀಟನ್ನು ಸಿದ್ರಾಮಣ್ಣ ಸೋಲಿಸ್ತಾರೆ. ಅದೇ ಮಾದರಿಯಲ್ಲಿ ಸಿದ್ರಾಮಣ್ಣ ಬೆಂಬಲಿಗರನ್ನು ಡಿಕೆಶಿ ಮುಗಿಸುತ್ತಾರೆ. ಇವರಿಬ್ಬರ ಬೆಂಬಲಿಗ ಸ್ಪರ್ಧಿಗಳನ್ನು ಸೋಲಿಸಲು ಖರ್ಗೆ ಶ್ರಮಿಸುತ್ತಾರೆ ಎಂದ ಅವರು, ರೇವಣ್ಣ- ಕುಮಾರಣ್ಣನ ನಡುವೆ ಗಲಾಟೆ ಆರಂಭವಾಗಿದೆ. ಅದಕ್ಕಾಗಿಯೇ ಹಾಸನದ ಅಭ್ಯರ್ಥಿಗಳನ್ನು ಇನ್ನೂ ಪ್ರಕಟಿಸಿಲ್ಲ ಎಂದರು.

ಮನೆಮನೆಗಳ ಸಂಪರ್ಕ, ಅಭಿವೃದ್ಧಿ ಕಾರ್ಯಗಳನ್ನು ಮನೆಗಳಿಗೆ ತಲುಪಿಸುವ ಕಾರ್ಯ, ಜಿಲ್ಲಾ ಸಮಾವೇಶ, ಮೋರ್ಚಾ ಸಮಾವೇಶ ನಡೆಸಬೇಕು. ಫೆಬ್ರವರಿಯಲ್ಲಿ ಯಾತ್ರೆಗಳು ಆರಂಭವಾಗಲಿವೆ ಎಂದು ಪ್ರಕಟಿಸಿದರು.

ಸುವರ್ಣಸೌಧದಲ್ಲಿ ವೀರ ಸಾವರ್ಕರ್ ಅವರ ಫೋಟೋ ಅನಾವರಣಕ್ಕಾಗಿ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಅಭಿನಂದಿಸಿದರು. ಅತಿ ಹೆಚ್ಚು ಜೈಲುವಾಸ ಅನುಭವಿಸಿದ ಸ್ವಾತಂತ್ರ್ಯ ಹೋರಾಟಗಾರ ಅವರು. ಒಂದು ಕುಟುಂಬವೇ ಸ್ವಾತಂತ್ರ್ಯ ತಂದು ಕೊಟ್ಟಿದೆ ಎನ್ನುವ ಕಾಂಗ್ರೆಸ್ ಪಕ್ಷದವರು ಅಧಿಕಾರದ ಲಾಲಸೆ ಉಳ್ಳವರು. ರಾಜಕಾರಣಕ್ಕಾಗಿ ಇಂಥ ಹೋರಾಟಗಾರರನ್ನು ಮರೆತರು ಎಂದು ಟೀಕಿಸಿದರು.

ಇದೀಗ ದೇಶ ಬದಲಾಗಿದೆ. ರಾಷ್ಟ್ರಕ್ಕಾಗಿ ಬದುಕಿದ ಚೇತನಗಳನ್ನು ನೆನಪಿಸಿಕೊಳ್ಳುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ. ಡಾ. ಬಿ.ಆರ್.ಅಂಬೇಡ್ಕರರಿಗೂ ಕಾಂಗ್ರೆಸ್ ಅನ್ಯಾಯ ಮಾಡಿತ್ತು. ಸಂವಿಧಾನ ಶಿಲ್ಪಿಯನ್ನು ಕಾಂಗ್ರೆಸ್ ಪಕ್ಷ ಮರೆತು ಅವಮಾನಿಸಿ, ಗುಲಾಮಗಿರಿಯ ರಾಜಕೀಯ ಮಾಡಿತು ಎಂದು ಆಕ್ಷೇಪಿಸಿದರು. ಸ್ವಾತಂತ್ರ್ಯ ಹೋರಾಟಗಳನ್ನು ಮರೆತು, ದೇಶಪ್ರೇಮಿಗಳಿಗೆ ಅವಮಾನ ಮಾಡಿದ ಕಾಂಗ್ರೆಸ್ಸಿಗರು ಚರಿತ್ರೆಯನ್ನೇ ತಿರುಚಿದ್ದಾರೆ ಎಂದು ನುಡಿದರು.

 

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನೀಡಲಿಲ್ಲ. ಆ ಕೆಲಸವನ್ನು ಬಿಜೆಪಿ ಮಾಡಿದೆ. ಇವತ್ತು ದೇಶದಲ್ಲಿ ನಕಲಿ ಕಾಂಗ್ರೆಸ್ ಇದೆ. ಮತಬ್ಯಾಂಕ್, ಸ್ವಾರ್ಥಭರಿತ ರಾಜಕಾರಣದ ನಿರೀಕ್ಷೆಯಿಂದ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ಮಹಾತ್ಮ ಗಾಂಧಿ ಸೂಚಿಸಿದ್ದರು. 2014ರ ಬಳಿಕ ರಾಮರಾಜ್ಯದ ಪರಿಕಲ್ಪನೆಯು ಮೋದಿಜಿ ನೇತೃತ್ವದಲ್ಲಿ ಅನುಷ್ಠಾನಕ್ಕೆ ಬರುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಕಾಶಿ ಕಾರಿಡಾರ್ ನಿರ್ಮಾಣದಂಥ ಕಾರ್ಯ ನಡೆದಿದೆ ಎಂದರು.

ಮತಬ್ಯಾಂಕಿಗಾಗಿ ಮತಾಂಧ, ಮತಾಂತರ, ಹತ್ಯೆಕೋರನಾದ ಟಿಪ್ಪುವಿನ ಜಯಂತಿ ಮಾಡಿದ ಸಿದ್ದರಾಮಣ್ಣ, ಹತ್ತಾರು ಗಲಭೆಗಳಿಗೆ ಕಾರಣರಾದರು ಎಂದು ಟೀಕಿಸಿದರು. ಸಾವರ್ಕರ್- ಟಿಪ್ಪು ಇತಿಹಾಸವನ್ನು ಸಿದ್ದರಾಮಣ್ಣ ಓದಬೇಕೆಂದು ಆಗ್ರಹಿಸಿದರು. ಗೂಂಡಾಗಿರಿಯ ಹಿನ್ನೆಲೆ ಇರುವ ಡಿ.ಕೆ.ಶಿವಕುಮಾರ್ ಭಯೋತ್ಪಾದನೆಯನ್ನೇ ಸಮರ್ಥಿಸುತ್ತಾರೆ. ಸಿದ್ರಾಮಣ್ಣ, ಪಿಎಫ್‍ಐಯ 2 ಸಾವಿರ ಜನರ ಕೇಸು ರದ್ದು ಮಾಡಿದ್ದರು. ರೈತರ ಆತ್ಮಹತ್ಯೆ ಹೆಚ್ಚಾಯಿತು. ಹಿಂದೂಗಳ ಹತ್ಯೆ ಆಯಿತು. ಆದರೆ, ಗೋಸಾಗಾಟಗಾರರಿಗೆ ಪರಿಹಾರ ಕೊಡಲಾಯಿತು ಎಂದು ವಿವರಿಸಿದರು.

ಸಿದ್ರಾಮಣ್ಣನ ಸರಕಾರ ಗೋಹತ್ಯೆಯ ಪರವಿತ್ತು. ಲೂಟಿ, ಬೆಂಕಿ ಇಡುವವರ ಪರ ಇತ್ತು. ಸ್ಯಾಂಡ್- ಲ್ಯಾಂಡ್- ಡ್ರಗ್ ಮಾಫಿಯಕ್ಕೆ ಸಿದ್ರಾಮಣ್ಣನ ಸರಕಾರವು ಬೆಂಬಲ ಕೊಟ್ಟಿತ್ತು. ಇವೆಲ್ಲವುಗಳನ್ನು ಬೊಮ್ಮಾಯಿ ಸರಕಾರ ನಿಯಂತ್ರಿಸಿದೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಭಯೋತ್ಪಾದಕರ ಪರವಿದ್ದಾರೆ. ದೇಶವಿರೋಧಿಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತದೆ. ಕಾಂಗ್ರೆಸ್ ಅಧ್ಯಕ್ಷೆ ಸೈನಿಕರ ಸಾವಿಗೆ ಕಣ್ಣೀರು ಹಾಕುವುದಿಲ್ಲ. ಆದರೆ, ಭಯೋತ್ಪಾದಕರು ಸತ್ತಾಗ ಕಣ್ಣೀರು ಹಾಕುತ್ತಾರೆ. ನೆಹರೂವಿನಿಂದ ಮನಮೋಹನ್ ಸಿಂಗ್ ವರೆಗೆ ಕಾಂಗ್ರೆಸ್ ಭ್ರಷ್ಟ ಸರಕಾರವನ್ನೇ ನೀಡಿದೆ. ಶಾಸ್ತ್ರೀಜಿ ಇದಕ್ಕೆ ಹೊರತಾಗಿದ್ದರು. ಆದರೆ, ಬಿಜೆಪಿ ಸರಕಾರವು ವಾಜಪೇಯಿ- ಮೋದಿಜಿ ನೇತೃತ್ವದಲ್ಲಿ ಕಳಂಕರಹಿತ ಸರಕಾರಗಳನ್ನು ನೀಡಿವೆ ಎಂದರು.

ರಾಹುಲ್, ಸೋನಿಯಾ ಗಾಂಧಿ ಅವರನ್ನು ತನಿಖೆ ಮಾಡಿದರೆ ಪ್ರತಿಭಟನೆ ಮಾಡುತ್ತಾರೆ. ಮೋದಿಜಿ, ಅಮಿತ್ ಶಾರನ್ನು ವಿಚಾರಣೆ ಮಾಡಿದರೆ ನಾವು ಸ್ಟ್ರೈಕ್ ಮಾಡಿಲ್ಲ. ಕಾಂಗ್ರೆಸ್‍ಗೆ ಭಯೋತ್ಪಾದನೆ, ಭ್ರಷ್ಟಾಚಾರದ ಮೇಲೆ ಮಾತ್ರ ನಂಬಿಕೆ ಇದೆ. ಈ ನೆಲದ ಕಾನೂನಿನ ಮೇಲೆ ನಂಬಿಕೆ ಇಲ್ಲ ಎಂದು ಆರೋಪಿಸಿದರು.

ರೌಡಿಸಂ ರಾಜಕಾರಣ ಬಿಟ್ಟು ಭಯೋತ್ಪಾದನೆ ರಾಜಕಾರಣಕ್ಕೆ ಶಿವಕುಮಾರ್ ಕಾಲಿಟ್ಟಿದ್ದಾರೆ. ಭ್ರಷ್ಟಾಚಾರಿಗಳನ್ನು ಜನರು ದೂರವಿಟ್ಟಿದ್ದು, ಕಾಂಗ್ರೆಸ್‍ಮುಕ್ತ ಭಾರತವನ್ನು ನಿರ್ಮಿಸುತ್ತಿದ್ದಾರೆ. ಪಂಚರಾಜ್ಯ ಚುನಾವಣೆ, 2 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್‍ಮುಕ್ತ ದೇಶ ಆಗುತ್ತಿರುವುದಕ್ಕೆ ಇದೇ ಸ್ಪಷ್ಟ ನಿದರ್ಶನ ಎಂದು ವಿಶ್ಲೇಷಿಸಿದರು. ನೀಚ- ತುಷ್ಟೀಕರಣ- ಭ್ರಷ್ಟಾಚಾರ- ಪರಿವಾರವಾದದ ರಾಜಕೀಯವನ್ನು ಜನರು ತಿರಸ್ಕರಿಸುತ್ತಿದ್ದಾರೆ ಎಂದು ತಿಳಿಸಿದರು.

ಹಿರಿಯರ ತ್ಯಾಗ- ಬಲಿದಾನದಿಂದ ಪಕ್ಷವು ದೇಶದಲ್ಲೇ ಅತಿದೊಡ್ಡ ಪಕ್ಷವಾಗಿ ಬೆಳೆದಿದೆ ಎಂದ ಅವರು, ಇಲ್ಲಿ ಮೊದಲ ಬಾರಿಗೆ ರಾಜ್ಯ ಪದಾಧಿಕಾರಿಗಳ ಸಭೆ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಗೆಲುವು ಅನಿವಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ- ರಾಜ್ಯ ಸರಕಾರಗಳ ಸಾಧನೆಗಳನ್ನು ನಾವು ಜನರಿಗೆ ತಿಳಿಸಿದ್ದೇವೆಯೇ? ಎಂದು ಕೇಳಿದರಲ್ಲದೇ ಸ್ವಾಭಿಮಾನಿ ಭಾರತದಲ್ಲಿ ಕರ್ನಾಟಕ ರಾಜಕಾರಣದಲ್ಲಿ ಬಿಜೆಪಿ ಗೆಲುವು ಅನಿವಾರ್ಯ. ಅದಕ್ಕಾಗಿ ಬೂತ್ ಗೆಲುವು, ಶಕ್ತಿ ಕೇಂದ್ರಗಳು, ಮಹಾಶಕ್ತಿ ಕೇಂದ್ರಗಳನ್ನು ಚುರುಕುಗೊಳಿಸಬೇಕಿದೆ ಎಂದರು.

ಜಿಲ್ಲಾ ಮತ್ತು ರಾಜ್ಯ ಸಮಿತಿಗಳ ಜೊತೆಗೂಡಿ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಕಿಸಾನ್ ಸಮ್ಮಾನ್ ಯೋಜನೆ ಬಡವರ ಮನೆಗೆ ಅರ್ಜಿ ಕೊಡದೆ ಬರುತ್ತಿದೆ. ರೈತರ ಜಾಗೃತಿ ಮಾಡಬೇಕು. ಆಯುಷ್ಮಾನ್ ಸೇರಿ ಎಲ್ಲ ಯೋಜನೆಗಳ ಕುರಿತು ನೆನಪಿಸಬೇಕಿದೆ. ಮೀಸಲಾತಿ ಪ್ರಮಾಣ ಹೆಚ್ಚಳ, ಉಚಿತ ವಿದ್ಯುತ್, ವಿದ್ಯಾನಿಧಿ ಸೇರಿ ವಿವಿಧ ಯೋಜನೆಗಳ ಕುರಿತ ಮಾಹಿತಿ ಕೊಡಬೇಕಿದೆ ಎಂದು ಕಿವಿಮಾತು ಹೇಳಿದರು.

ನರೇಂದ್ರ ಮೋದಿ ಅವರ ಕುರಿತು ಟೀಕೆ ಮಾಡುವವರಿಗೆ ಸ್ಪಷ್ಟ ಉತ್ತರ ಕೊಡಬೇಕಿದೆ ಎಂದು ತಿಳಿಸಿದರು. ಜನಪರ- ಬಡವರ ಪರ ಯೋಜನೆಗಳ ಅನುಷ್ಠಾನದ ಕುರಿತು ತಿಳಿಸಬೇಕು. ಅರ್ಥಗರ್ಭಿತ ಯೋಜನೆಗಳ ಕುರಿತು ಪ್ರತಿಕ್ರಿಯೆ ಪಡೆಯಬೇಕು. ಇದು ಮತವಾಗಿ ಪರಿವರ್ತನೆ ಆಗುವಂತಾಗಲಿ. ಅಂಥ ಮಹತ್ವದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸಲಹೆ ನೀಡಿದರು.

ಬಿಜೆಪಿ ಬಗ್ಗೆ ಅನುಮಾನ ಪಡುತ್ತಿದ್ದ ದಲಿತ ಮುಖಂಡರು, ದಲಿತ ಜನಾಂಗ, ಪರಿಶಿಷ್ಟ ಜಾತಿ, ಪಂಗಡಗಳೀಗ ಬಿಜೆಪಿಯತ್ತ ಆಕರ್ಷಿತವಾಗುತ್ತಿವೆ. ಇದನ್ನು ಮತವಾಗಿ ಪರಿವರ್ತಿಸುವ ಹೊಣೆಯನ್ನು ನಾವು ಹೊರಬೇಕು ಎಂದು ತಿಳಿಸಿದರು.

ಬಿಜೆಪಿ ಆಡಳಿತವು ಗ್ರಾಮ ಪಂಚಾಯಿತಿ ಸದಸ್ಯರ, ಅಧ್ಯಕ್ಷರ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಮಾಡಿದ್ದನ್ನು ತಿಳಿಸಬೇಕಿದೆ. ರಾಜ್ಯಾಧ್ಯಕ್ಷರ ಸಲಹೆ ಮೇರೆಗೆ ಗೌರವಧನವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದೆ. 90 ಸಾವಿರಕ್ಕೂ ಹೆಚ್ಚು ಜನರಿಗೆ ಇದರ ಪ್ರಯೋಜನ ಲಭಿಸಿದೆ ಎಂದು ಮೆಚ್ಚುಗೆ ಸೂಚಿಸಿದರು. ಇದಕ್ಕಾಗಿ 138 ಕೋಟಿ ಬಿಡುಗಡೆ ಮಾಡಿದ್ದು, ಇದರ ಪ್ರಯೋಜನ ಪಡೆಯಬೇಕಲ್ಲವೇ ಎಂದು ಪ್ರಶ್ನಿಸಿದರು.

ಟಿಪ್ಪು ನರಮೇಧದ ಕುರಿತು ಸಾಮಾನ್ಯ ಜನರಿಗೆ ಮನವರಿಕೆ ಮಾಡಬೇಕಲ್ಲವೇ? ವೀರ ಸಾವರ್ಕರ್ ಬಗ್ಗೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದನ್ನು ಖಂಡಿಸಬೇಕಲ್ಲವೇ? ಎಂದು ಪ್ರಶ್ನಿಸಿದ ಅವರು, ವೀರ ಸಾವರ್ಕರ್ ಫೋಟೋ ಅನಾವರಣ ಗಂಡುಮೆಟ್ಟಿನ ನೆಲದ ತಾಕತ್ತು ಎಂದು ವಿಶ್ಲೇಷಿಸಿದರು.

ಬೇಹಗಾರಿಕೆ ದಳಗಳು ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಗೆಲುವಿನ ಸೂಚನೆ ನೀಡುತ್ತಿವೆ. ಬಿಜೆಪಿ 150 ಸೀಟು ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ನಾಯಕ್, ಶಾಸಕರಾದ ಸುನೀಲ್ ನಾಯ್ಕ, ದಿನಕರ್ ಶೆಟ್ಟಿ, ರೂಪಾಲಿ ನಾಯ್ಕ ಮತ್ತು ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ – ವಿದ್ಯಾರ್ಥಿ ಸಾವು

Next Post

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತದ ಬಲೆಗೆ ಬಿದ್ದ ಕಡು ಭ್ರಷ್ಟ ಗ್ರಾಮಲೆಕ್ಕಾಧಿಕಾರಿ ಲಂಚಬಾಕ ಹರೀಶ್

Kannada News Desk

Kannada News Desk

Next Post
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತದ ಬಲೆಗೆ ಬಿದ್ದ ಕಡು ಭ್ರಷ್ಟ ಗ್ರಾಮಲೆಕ್ಕಾಧಿಕಾರಿ ಲಂಚಬಾಕ ಹರೀಶ್

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತದ ಬಲೆಗೆ ಬಿದ್ದ ಕಡು ಭ್ರಷ್ಟ ಗ್ರಾಮಲೆಕ್ಕಾಧಿಕಾರಿ ಲಂಚಬಾಕ ಹರೀಶ್

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d