
ಭಟ್ಕಳ-ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ *ಡಿಸೆಂಬರ್ 31 ರ ಮಂಗಳವಾರ* ದಂದು ಭಟ್ಕಳದ ಶಿರಾಲಿಯ ಅಳಿವೆಕೋಡಿ ದುರ್ಗಾಪರಮೇಶ್ವರಿ ಸಮುದಾಯ ಭವನದಲ್ಲಿ ಆಯೋಜಿಸಿದ ಭಟ್ಕಳ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ತಿಳಿಸಲಾಗುವುದು ಎಂದು ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.

