ಲೋಕಾಯುಕ್ತ ಬಲೆಗೆ ಬಿದ್ದ
ಕಿತ್ತೂರು ಲಂಚಬಾಕ ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನ ಜಿ ಗೆ ನವಂಬರ್ 28 ರವರೆಗೆ ನ್ಯಾಯಾಂಗ ಬಂಧನ
ಕಿತ್ತೂರು : ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ್ ಮತ್ತು ಗುಮಾಸ್ತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದರು.
ಇಂದು ಇಬ್ಬರು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ತಹಶೀಲ್ದಾರ್ ಮತ್ತು ಗುಮಾಸ್ತನಿಗೆ ನವೆಂಬರ್ 28 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.
ವ್ಯಕ್ತಿಯೋರ್ವರಿಂದ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನ ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕಿತ್ತೂರು ತಾಲೂಕಿನ ಖೊದಾನಪೂರ ಗ್ರಾಮದ ಬಾಪುಸಾಹೇಬ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು.
ಈ ವೇಳೆ ಕಿತ್ತೂರು ತಹಶೀಲ್ದಾರ್ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಬಾಪುಸಾಹೇಬ್ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.ಅಂತೆಯೇ ತಹಶೀಲ್ದಾರ್ ಮತ್ತು ಗುಮಾಸ್ತ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಆಗಿ ಲೋಕಾಯುಕ್ತ ಅಧಿಕಾರಿಗಳ ಸಿಕ್ಕಿಬಿದ್ದಿದ್ದಾರೆ.