ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ – ವಿದ್ಯಾರ್ಥಿ ಸಾವು
ಕಾಸರಗೋಡು- ಸ್ಕೂಟರ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಚಂದ್ರಗಿರಿ ಶಾಲೆಯ ಪ್ಲಸ್ ವನ್ ಕಲಿಯುತ್ತಿದ್ದ ಅಸ್ಬಾಕ್ (18) ಮೃತಪಟ್ಟ ವಿದ್ಯಾರ್ಥಿ.
ಬೇಕಲ ಮವ್ವಾಲ್ ನಿವಾಸಿಯಾಗಿದ್ದ ಈತ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದಾಗ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಆಸ್ಬಾಕ್ ನನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಿಲಿಲ್ಲ.