ಹೊಸನಗರ: ಹೃದಯಾಘಾತದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ ಮೃತಪಟ್ಟಿರುವ ಘಟನೆ ನಡೆದಿದೆ.
ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ.
ಕೊಡೂರಿನ ಆದರ್ಶ ಎಂಬವರೊಂದಿಗೆ ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು.