ಮಂಗಳೂರು: ಸುರತ್ಕಲ್ ನಲ್ಲಿ ಚೂರಿ ಇರಿತ; ಗಾಯಾಳು ಸಾವು
ಮಂಗಳೂರು: ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಫಾಝಿಲ್ ಹತ್ಯೆ ನಡೆದ ಸುರತ್ಕಲ್ ಸಮೀಪದ ಕೃಷ್ಣ ಪುರ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿದ್ದು,ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿಸ್ಥೆ ಫಲಕಾರಿಯಾಗದೆ ಗಾಯಾಳು ಸಾವು.
ಗಾಯಳು ಯುವಕನನ್ನು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಚೂರಿ ಇರಿತಕ್ಕೆ ನಿಖರ ಕಾರಣತಿಳಿದುಬಂದಿಲ್ಲ.
ಕಳೆದ ಕೆಲ ತಿಂಗಳುಗಳ ಹಿಂದೆ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನೊಬ್ಬನನ್ನು ಸಂಜೆ ವೇಳೆಗೆ ಅಂಗಡಿಯೊಂದರ ಮುಂಭಾಗದಲ್ಲೇ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡವು ಹತ್ಯೆ ಮಾಡಿತ್ತು. ಇಂದು ಅದೇ ರೀತಿಯಲ್ಲಿ ಜಲೀಲ್ ಗೂ ಚೂರಿ ಇರಿತವಾಗಿದ್ದು, ಅಂಗಡಿಯೊಂದರ ಮುಂಭಾಗದಲ್ಲೇ ಕೃತ್ಯ ನಡೆದಿದೆ.
ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ: ಅದ್ದಿ ಬೊಳ್ಳೂರು