ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಕೀರ್ತನ ಸಾವು
ಮಡಿಕೇರಿ- ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.
ಕೀರ್ತನ್(12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಶನಿವಾರ ತಡ ರಾತ್ರಿ ವೇಳೆ ಎದೆ ನೋವೆಂದು ಬಾಲಕ ಹೇಳಿಕೊಂಡಿದ್ದು, ಪೋಷಕರು ಗಾಬರಿಯಿಂದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗೆ ಕೀರ್ತನ್ ಮೃತಪಟ್ಟಿದ್ದ ಎಂದು ಹೇಳಲಾಗಿದೆ.
ಕೀರ್ತನ್ ನ ತಂದೆ ಮಂಜಾಚಾರಿ ಕೀರ್ತನ್ ಓದುತ್ತಿದ್ದ ಶಾಲೆಯ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ಅವರ ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಎಳೆಯ ಪ್ರಾಯದ ಮಕ್ಕಳು ಕೂಡ ಹೃದಯಾಘಾತದಿಂದ ಮೃತಪಡುತ್ತಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.