ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ – ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು
ಹೊನ್ನಾವರ-ಸ್ಕೂಟಿಗೆ ಹಿಂಬದಿನಿಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾವರದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಗೇರುಸೊಪ್ಪಾ ವೃತ್ತದ ಬಳಿ ಅಪಘಾತ ಸಂಭವಿಸಿದ್ದು ಕಂಟೇನರ್ ಹತ್ತಿದ ಪರಿಣಾಮ ಸ್ಕೂಟಿಯಲ್ಲಿ ತೆರಳುತ್ತಿದ್ದ ಸಾವಿತ್ರಿ ಭಟ್(64) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆಯ ಪತಿಗೆ ಗಂಭೀರ ಗಾಯಗಳಾಗಿದ್ದು ಹೊನ್ನಾವರ ತಾಲ್ಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಮಹಿಳೆ ದೇಹ ಛಿದ್ರ ಛಿದ್ರವಾಗಿದ್ದು ಭೀಕರ ಅಪಘಾತ ಕಂಡು ವಾಹನ ಸವಾರರು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಇನ್ನು ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಸ್ಥಳಾಂತರಿಸುವ ಕಾರ್ಯ ಮಾಡಿದ್ದು ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ. ಅಪಘಾತಪಡಿಸಿದ ಕಂಟೇನರ್ ಹಾಗೂ ಚಾಲಕನನ್ನ ವಶಕ್ಕೆ ಪಡೆದಿದ್ದು, ಈ ಸಂಬAಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.