ಉಡುಪಿ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟದ ನೀಚ ಕೃತ್ಯಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.
ಇಂದು ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉಡುಪಿಯಿಂದ ಶಿರಹಟ್ಟಿಗೆ ತೆರಳಿದ ಸಂದರ್ಭದಲ್ಲಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಬಿಎಸ್ವೈ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಎಸ್ವೈ ಜತೆ ಸಿಎಂ ಬೊಮ್ಮಾಯಿ ಮತ್ತು ಕಾರಜೋಳ ಸಹ ಶಿರಹಟ್ಟಿಗೆ ಪ್ರಯಾಣ ಮಾಡಿದರು.