ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ (Congress) ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ (Satish Jarakiholi) ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.ಈ ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಿಂದೂ ಎಂಬುದು ಭಾರತದ ಜೀವನ ಪದ್ಧತಿ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸತೀಶ್ ಜಾರಕಿಹೊಳಿ ಅವರು ಹಾಗಿದ್ದರೆ, ಸುಪ್ರೀಂಕೋರ್ಟಿಗಿಂತ ದೊಡ್ಡವರೇ ಎಂದು ಪ್ರಶ್ನಿಸಿದ್ದಾರೆ. ಬಾಬಾಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಿಂದೂ ಧರ್ಮದ ಬಗ್ಗೆ ಇದೊಂದು ಜೀವನ ಪದ್ಧತಿ ಎಂದು ಹಲವೆಡೆ ಉಲ್ಲೇಖಿಸಿದ್ದಾರೆ. ಹಿಂದೂಗಳು ಒಗ್ಗಟ್ಟಾಗಬೇಕೆಂದು. ಆ ಮೂಲಕ ರಾಷ್ಟ್ರ ರಕ್ಷಣೆ ಆಗಲಿದೆ ಎಂದು ತಿಳಿಸಿದ್ದರು ಅಂತ ಹೇಳಿದ್ದಾರೆ.