ಉತ್ತರ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಗಣಪಯ್ಯ ಗೌಡ ಅವರ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ
ಕುಮಟಾ: ತಾಲೂಕಿನ ಹೀರೆಗುತ್ತಿ ಬಳಿ ಕಾರು,ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತಗೊಂಡಿರುವ ಕಾರು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪತಿ ಗೌಡರದ್ದಾಗಿದ್ದು ಅಂಕೋಲಾದಿಂದ ಹೊನ್ನಾವರ ಕಡೆ ತೆರಳುತ್ತಿರುವಾಗ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿ ಗಣಪತಿ ಗೌಡ ಜೊತೆ, ವಿ.ಎಂ.ಭಂಡಾರಿ, ಪರಮೇಶ್ವರ ನಾಯ್ಕ್ ಎಂಬುವವರು ಪ್ರಯಾಣಿಸುತ್ತಿದ್ದು ಮೂವರಿಗೂ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಕುಮಟಾ ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಅಪಘಾತ ಸ್ಥಳಕ್ಕೆ ಬೇಟಿ ನೀಡಿ , ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ.