40 ಲಕ್ಷ ರೂಪಾಯಿಗೂ ಅಧಿಕ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕನ ಪುತ್ರ
ದಾವಣಗೆರೆ -ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
40 ಲಕ್ಷ ರೂಪಾಯಿಗೂ ಅಧಿಕ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಸಕರ ಕಚೇರಿಯಲ್ಲಿ ಹಣ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.
ಪ್ರಶಾಂತ್ ಇಂದು ಕ್ರೆಸೆಂಟ್ ರಸ್ತೆಯ ಶಾಸಕರ ಕಚೇರಿಯಲ್ಲೇ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ನೂ 10 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಟೆಂಡರ್ ಕೊಡಿಸುವ ವಿಚಾರಕ್ಕೆ ಪ್ರಶಾಂತ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. BWSSB ಮುಖ್ಯ ಲೆಕ್ಕಾಧಿಕಾರಿಯಾಗಿರುವ ಶಾಸಕರ ಪುತ್ರ ಪ್ರಶಾಂತ್ KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.