ಬೆಂಗಳೂರು-ಸಿಲಿಂಡರ್ ಸ್ಫೋಟಗೊಂಡು ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ನಡೆದಿದೆ.
ಮಹೇಶ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಸಿಲಿಂಡರ್ ಫಿಲ್ಲಿಂಗ್ ಅಂಗಡಿಯ ಪಕ್ಕದಲ್ಲಿ ಮಹೇಶ್ ನಿಂತಿದ್ದ. ಈ ವೇಳೆ ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಇದರಿಂದಾಗಿ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎಂದು ಮಾಹಿತಿ ತಿಳಿದು ಬಂದಿದೆ.