ಮಾರ್ಚ್ 9ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ
ತುಮಕೂರು- ಮಾರ್ಚ್ ರಂದು ಕರ್ನಾಟಕದಾದ್ಯಂತ ಬಂದ್ಗೆ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕರೆ ನೀಡಿದ್ದಾರೆ. ಅವರು ನಿನ್ನೆ ತುಮಕೂರಿನ ಕೊರಟಗೆರೆಯಲ್ಲಿ ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ.
2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ.
ಇದೇ ವೇಳೆ ಅವರು ಮಾತನಾಡಿ, ಇದೇ ವೇಳೆ ಅವರು ಮಾತನಾಡಿ, ಬಂದ್ ವೇಳೆ ಯಾರಿಗೂ ತೊಂದರೆ ನೀಡಲ್ಲ. ಶಾಂತಿ ರೀತಿಯಿಂದ ಪ್ರತಿಭಟನೆ ಮಾಡಬೇಕು. ವ್ಯಾಪಾರವನ್ನ ಎರಡು ಗಂಟೆಗಳ ಕಾಲ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.