ಮಂಗಳೂರು-ಸಾಮಾಜಿಕ ಜಾಲತಾಣದಲ್ಲಿ ಬಿಗ್ಬಾಸ್ ಸ್ಪರ್ಧಿಯಾಗಿರುವ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದಾರೆ.
ಈ ಪ್ರಕರಣವನ್ನು ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.