ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಮೂಲದ ಶಂಕಿತ ಶಬ್ಬೀರ್ ನನ್ನು ವಶಕ್ಕೆ ಪಡೆದ ಎನ್ಐಎ
ಬೆಂಗಳೂರು-ದೇಶದಾದ್ಯಂತ ಸುದ್ದಿಯಾಗಿದ್ದಾ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಬಾಂಬರ್ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾದ ಶಂಕಿತನೊಬ್ಬನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಂದರ್ಭಿಕ ಸಾಕ್ಷ್ಯ ಹಾಗೂ ಅನುಮಾಸ್ಪದ ಕಾರಣಗಳಿಂದಾಗಿ ಬಳ್ಳಾರಿ ಮೂಲದ ಶಬ್ಬೀರ್ ನನ್ನು ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಇದುವರೆಗೂ ಕುಕ್ಕರ್ ಹಾಗೂ ಟಿಫಿನ್ ಬಾಕ್ಸ್ ಬಾಂಬ್ಗಳನ್ನು ಸ್ಪೋಟಿಸಲಾಗಿತ್ತು. ಆದರೆ, ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಿಸಿರುವುದು ಸಿಲ್ವರ್ ಪ್ಲಾಸ್ಟಿಕ್ ಬಾಂಬ್ ಆಗಿರುವುದು ವಿಶೇಷವಾಗಿದೆ. ಇದೇ ಮೊದಲ ಬಾರಿಗೆ ಹೊಸ ಮಾದರಿಯ ಬಾಂಬ್ ಸ್ಪೋಟಿಸಿರುವುದರಿಂದ ಬಾಂಬರ್ ಐಸಿಸ್ ಉಗ್ರರ ಅಣತಿ ಮೇರೆಗೆ ಈ ಕೃತ್ಯ ನಡೆಸಿದ್ದಾನೆ ಎನ್ನುವುದು ತಿಳಿದುಬಂದಿದೆ.
ಐಸಿಸ್ ಉಗ್ರ ಸಂಘಟನೆಯಿಂದ ಪ್ರೇರಿಪಿತಗೊಂಡಿದ್ದ ಬಾಂಬರ್ ಆ ಸಂಘಟನೆಯಿಂದ ತರಬೇತಿ ಪಡೆದ ನಂತರವೇ ರಾಮೇಶ್ವರಂ ಕೆಫೆಯಲ್ಲಿ ಸಿಲ್ವರ್ ಪ್ಲಾಸ್ಟಿಕ್ ಮಾದರಿಯ ಬಾಂಬ್ ಸ್ಪೋಟಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಾಂಬ್ ಸ್ಪೋಟಕ್ಕೂ ಮುನ್ನ ಬಾಂಬರ್ ಶಿವನಸಮುದ್ರ, ಗುಂಡ್ಲುಪೇಟೆ, ತಮಿಳುನಾಡಿನ ಕೃಷ್ಣಗಿರಿ ಹಾಗೂ ಕೇರಳ ಗಡಿಭಾಗದ ಅರಣ್ಯಪ್ರದೇಶಗಳಲ್ಲಿ ತರಬೇತಿ ಪಡೆದಿರುವುದು ತನಿಖೆ ವೇಳೆ ಬಯಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಶಂಕಿತ ಬಾಂಬರ್ ಆಂಧ್ರಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.