ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರಿಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಮಂಜೂರು
ನವದೆಹಲಿ- ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಪಾಲಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಜೂನ್ 1 ರ ವರೆಗೆ ಜಾಮೀನು ನೀಡಿದೆ. ಜೂನ್ 2ರಂದು ಜೈಲಿಗೆ ಶರಣಾಗುವಂತೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ ಸೂಚಿಸಿದೆ.
ಜೂನ್ 4ರಂದು ಮತ ಎಣಿಕೆ ಹಿನ್ನಲೆ ಜೂನ್ 5ರವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಎಂದು ಕೇಜ್ರಿವಾಲ್ ಪರ ವಕೀಲರಾದ ಅಭಿಷೇಕ್ ಮನು
ಸಿಂಘ್ವಿ ಮನವಿ ಮಾಡಿದರು. ಅದರೆ ಇದನ್ನು ಪೀಠ ತಳ್ಳಿ ಹಾಕಿತು.
ಪ್ರಕರಣದಲ್ಲಿ ತನ್ನ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋ ರ್ಟ್ ತಳ್ಳಿ ಹಾಕಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋ ರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋ ರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.