ಅಂಕೋಲಾ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತ ಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದ ಸಚಿವ ಮಂಕಾಳ ವೈದ್ಯ
ಅಂಕೋಲಾ-ಅಂಕೋಲಾ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲಾಗಿದ್ದು, ಕಾರವಾರ -ಅಂಕೋಲಾ ಶಾಸಕರಾದ ಶ್ರೀ ಸತೀಶ್ ಸೈಲ್ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಇಂದು ಅಂಕೋಲಾ ಪ್ರವಾಸಿ ಮಂದಿರದಲ್ಲಿ 5 ಲಕ್ಷ ರೂಪಾಯಿ ಚೆಕನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮೃತರ ಕುಟುಂಬ ಸದಸ್ಯರಿಗೆ ನೀಡಿದರು.