ಕೊಪ್ಪಳ : ಕೊಪ್ಪಳ ತಾಲೂಕಿನಲ್ಲಿ ಹಾದು ಹೋಗಿರುವ ಚಿತ್ರದುರ್ಗ – ವಿಜಯಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ತಡರಾತ್ರಿ ನಡೆದ ಹಿಟ್ ಅಂಡ್ ರನ್ ಅವಘಡದಲ್ಲಿ ಮುನಿರಾಬಾದ್ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮುನಿರಾಬಾದ್ ಪೊಲೀಸ್ ಠಾಣೆಯ ಎಎಸ್‌ಐ ರಾಮಣ್ಣ (55) ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕೊಪ್ಪಳ ತಾಲೂಕಿನ ಒಣ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಅಧಿಕಾರಿಗೆ ಗುದ್ದಿಕೊಂಡು ಹೋಗಿದೆ. ಹೀಗಾಗಿ ಸ್ಥಳದಲ್ಲೇ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ವಾಹನ ಗುದ್ದಿದ ರಭಸಕ್ಕೆ ಅಧಿಕಾರಿಯ ತಲೆ ನಜ್ಜುಗುಜ್ಜಾಗಿದ್ದು ಗುರುತು ಸಿಗದಂತೆ ಆಗಿದೆ. ಇಂದು ಬೆಳಗ್ಗೆ 3:00 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.
ಘಟನಾ ಸ್ಥಳಕ್ಕೆ ಎಸ್ಪಿ ರಾಮ್. ಎಲ್ ಅರೆಸಿದ್ದಿ ಹಾಗೂ ಸಿಪಿಐ ಸುರೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.