ಅಂಕೋಲಾ ತಾಲೂಕಿನ ಶಿರೂರಿನ ಗುಡ್ಡ ಕುಸಿತದ ಪ್ರದೇಶಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜೇಯೇಂದ್ರ ಆಗಮನ
ಕಾರವಾರ: ಅಂಕೋಲಾ ತಾಲೂಕಿನ ಶಿರೂರಿನ ಗುಡ್ಡ ಕುಸಿತದ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂಕೋಲಾ, ಕಾರವಾರ ಸೇರಿದಂತೆ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಆಗಮಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಭಾನುವಾರ ಮಧ್ಯಾಹ್ನ 2.30 ರ ವೇಳೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಹ ನೆರೆ ಪೀಡಿತ ಪ್ರದೇಶ ಹಾಗು ಶಿರೂರು ಗುಡ್ಡ ಕುಸಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.