ಅಂಕೋಲಾ ತಾಲೂಕಾ ಆಸ್ಪತ್ರೆಯ ವೈದ್ಯ ಡಾ.ಈಶ್ವರಪ್ಪ ಎಂ ಅವರಿಗೆ ಕರ್ನಾಟಕ ಪ್ರೆಸ್ಸ್ ಕ್ಲಬ್ ಬೆಂಗಳೂರು ವತಿಯಿಂದ ನೀಡುವ ವೈದ್ಯ ಸೇವಾ ರತ್ನ ಪ್ರಶಸ್ತಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರಿಂದ ಪ್ರಧಾನ
ಅಂಕೋಲಾ-ಬೆಂಗಳೂರಿನ ನಯನ ಸಭಾಂಗಣದಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ವೈದ್ಯ ಸೇವಾ ರತ್ನ ಪ್ರಶಸ್ತಿ ನೀಡುವ ಕಾರ್ಯಕ್ರಮ ಗುರುವಾರ ನಡೆಯಿತು.
ಅಂಕೋಲಾ ತಾಲೂಕಾ ಆಸ್ಪತ್ರೆಯಲ್ಲಿ ಸರ್ಜನ ಆಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಾದ ಡಾ .ಈಶ್ವರಪ್ಪ ಎಂ. ಅವರನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಗುರುವಾರ ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ವತಿಯಿಂದ ನೀಡುವ ವೈದ್ಯ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು. ವೈದ್ಯ ಸೇವಾ ರತ್ನ ಪ್ರಶಸ್ತಿ ಪಡೆದ ಅಂಕೋಲಾ ದ ತಾಲೂಕಾ ಆಸ್ಪತ್ರೆಯಲ್ಲಿ ಸರ್ಜನ ಆಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಾದ ಡಾ .ಈಶ್ವರಪ್ಪ ಎಂ. ಅವರನ್ನು ಕರ್ನಾಟಕ ಪ್ರೆಸ್ಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ರಾದ ಶ್ರೀ ನಾಗರಾಜ್ ಅರ್ಜುನ್ ದೈವಜ್ಞ, ಕರ್ನಾಟಕ ಪ್ರೆಸ್ಸ್ ಕ್ಲಬ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಮಾರ ನಾಯ್ಕ್, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಂಚಾಲಕರಾದ ರೂಪೇಶ್ ಕಲ್ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.