ಭಟ್ಕಳ: ಒಂದು ದಶಕದಿಂದ ಭಟ್ಕಳದ ಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ವರ್ಗಾಯಿಸಿ ಎಂದು ಆಗ್ರಹಿಸಿ ಸೋಮವಾರ ರಾಜ್ಯ ಮಾಹಿತಿ ಹಕ್ಕು ಕಾಯ್ದೆ ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ರಾಜ್ಯ ಅಧ್ಯಕ್ಷ ರಮೇಶ್ ಕುಣಿಗಲ್ ನೇತೃತ್ವದಲ್ಲಿ ಭಟ್ಕಳ ತಾಲೂಕ ಘಟಕ ಮತ್ತು ಉತ್ತರಕನ್ನಡ ಜಿಲ್ಲಾ ಘಟಕದಿಂದ ಕಂದಾಯ ಸಚಿವ ಶ್ರೀ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಸಕಾರಾತ್ಮಕ ವಾಗಿ ಸ್ಪಂದಿಸಿದ ಸಚಿವರು ಕ್ರಮ ಕೈ ಗೊಳ್ಳುವ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ರಾಜ್ಯ ಅಧ್ಯಕ್ಷ ರಮೇಶ್ ಕುಣಿಗಲ್ ಅವರು ಭಟ್ಕಳದ ಸಹಾಯಕ ಕಮಿಷನರ್ ಕಚೇರಿ ಹಾಗೂತಹಶೀಲ್ದಾರ ಕಚೇರಿಯಲ್ಲಿನಿಯಮಬಾಹೀರವಾಗಿ ಹಲವು ವರ್ಷದಿಂದ ಸರ್ಕಾರಿ ನೌಕರರು ಬೀಡುಬಿಟ್ಟಿದ್ದಾರೆ. ಇಂತಹ ನೌಕರರಿಂದ ಆಡಳಿತ ಹದಗೆಟ್ಟಿದ್ದು ಭಟ್ಕಳದಲ್ಲಿ ಭ್ರಷ್ಟಾಚಾರ ಜಾಸ್ತಿ ಆಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತ ರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಕುಣಿಗಲ್ ವಿವರಿಸಿದರು. ದಶಕಕ್ಕೂ ಹೆಚ್ಚು ವರ್ಷ ಗಳಿಂದ ಇರುವ ಸಿಬ್ಬಂದಿ ವರ್ಗಾಯಿಸಿ ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘಟನೆ ಯ ತಾಲೂಕ ಅದ್ಯಕ್ಷ ನಾಗೇಂದ್ರ ನಾಯ್ಕ್, ಕಾರ್ಯದರ್ಶಿ ನಾಗೇಶ ನಾಯ್ಕ್ ಹೊನ್ನಿಗದ್ದೆ, ಪದಾಧಿಕಾರಿಗಳಾದ ಸುಬ್ರಾಯ ದೇವಾಡಿಗ, ಇತರ ಜಿಲ್ಲೆಯ ಪ್ರಮುಖರು, ಕಾರ್ಯಕರ್ತರು ಮುಂತಾದವರಿದ್ದರು.