ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು
ಬೆಂಗಳೂರು: ಬಿದರೂರು ಸಭೆಯಲ್ಲಿ ಹೃದಯಾಘಾತವಾಗಿ ವಾಂತಿ ಮಾಡಿಕೊಂಡಿದ್ದು, ತಕ್ಷಣವೇ ಅವರನ್ನು ಕಾರ್ಯಕರ್ತರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಭಾಗಿಯಾಗಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಶ್ರೀಶೈಲಪ್ಪ ಬಿದರೂರು ಅವರನ್ನು ಸಂಸದ ಡಿಕೆ ಸುರೇಶ್ ವಾಹನದಲ್ಲಿ ಕರೆದೊಯ್ದಿದಿದ್ದು, ಅವರದೊಂದಿಗೆ ಅವರ ಮಗ ಕೂಡ ತೆರಳಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶ್ರೀಶೈಲಪ್ಪ ಬಿದರೂರು ಸಾವನ್ನಪ್ಪಿದ್ದಾರೆ.
ಶ್ರೀಶೈಲಪ್ಪ ಬಿದರೂರು ರೋಣ ಹಾಗೂ ಗದಗ ಶಾಸಕರಾಗಿದ್ದರು. ರೋಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಹಾಕಿದ್ದರು. 2019ರಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶ್ರೀಶೈಲಪ್ಪ ಬಿದರೂರು ಅವರು ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದರು.