ಮತದಾರರ ಮಾಹಿತಿ ಕದ್ದ ಹಗರಣ-
ಬೆಂಗಳೂರು ನಗರ ಜಿಲ್ಲಾಧಿಕಾರಿ ಸೇರಿ ಇಬ್ಬರು ಅಧಿಕಾರಿಗಳು ಸಸ್ಪೆನ್ಡ್ (ಅಮಾನತು)
ಬೆಂಗಳೂರು: ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬೆಂಗಳೂರು ನಗರ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಆದೇಶ ಹೊರಡಿಸಿದೆ.
ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಬೆಂಗಳೂರಿನ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಉಸ್ತುವರಿಯೂವಹಿಸಿದ್ದ ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಅವರನ್ನು ಅಮಾನತು ಮಾಡಿ ಕೇಂದ್ರ ಚುನಾವಣೆ ಆಯೋಗ ತನಿಖೆಗೆ ಆದೇಶಿಸಿದೆ.